ಬೆಂಗಳೂರು : ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ಸದಸ್ಯರು ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳನ್ನು ನಿಷೇಧಿಸಬೇಕು. ಗೃಹ ಸಚಿವರು ʼರಾಜೀನಾಮೆʼ ನೀಡಬೇಕು ಎಂದು ಆಗ್ರಹಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಬೆಳಗ್ಗೆ ಜಯಮಹಲ್‌ನಲ್ಲಿರುವ ಗೃಹ ಸಚಿವರ ಮನೆಗೆ ಬಂದಿದ್ದ ಕಾರ್ಯಕರ್ತರು, ಪ್ರವೇಶ ದ್ವಾರದಲ್ಲಿ ಪ್ರತಿಭಟನೆ ಆರಂಭಿಸಿದ್ದು, ಕೆಲ ಹೊತ್ತಿನ ನಂತರ ಮನೆಯ ಗೇಟನ್ನ ದಾಟಿ ಮನೆಯ ಬಾಗಿಲು ಬಳಿ ಕೂತು ಪ್ರತಿಭಟನೆ ನಡೆಸಿದ್ದಾರೆ. ‘ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದ್ದಾರೆ. ನಂತರ ಪ್ರತಿಭಟನೆ ತೀವ್ರಗೊಂಡಿದ್ದು, ಸಚಿವರ ಮನೆಯ ಮುಂದಿನ ಪೀಠೋಪಕರಣಗಳನ್ನ ನಾಶಮಾಡಲಾರಂಭಿಸಿದರು. ನಂತರ ಪರಿಸ್ಥಿತಿಯನ್ನ ಸುಧಾರಿಸಲು ಪೋಲಿಸರು ಕಾರ್ಯಕರ್ತರನ್ನು ದ್ವಾರಬಾಗಿಲಿನಿಂದ ಹೊರಹಾಕಲು ಪ್ರಯತ್ನಿಸಿದರು. ಈ ವೇಳೆ ಪೋಲಿಸ್ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ಶುರುವಾಗಿದೆ. ನಂತರ ಪರಿಸ್ಥಿತಿ ಕೈಗೆಟುಕಾದ ಕಾರಣ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. 40 ಎಬಿವಿಪಿ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಠಾಣೆಗೆ ಕರೆದೊಯ್ಯಲಾಗಿದೆ. ನಂತರ ಗೃಹ ಸಚಿವರ ಮನೆ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ