ರಾಹುಲ್ ಗಾಂಧಿಯವರ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

‘ಮೋದಿ ಸರ್ ನೇಮ್’ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾ ಮಾಡಿದೆ.

ರಾಹುಲ್ ಗಾಂಧಿಗೆ ಮಧ್ಯಂತರ ತಡೆ ನಿರಾಕರಿಸಿದ ನ್ಯಾಯಾಲಯವು ಅವರ ಮನವಿಯನ್ನು ಪರಿಗಣನೆಗಾಗಿ ಕಾಯ್ದಿರಿಸಿತ್ತು. ಆದರೆ ಈಗ ರಾಹುಲ್ ಗಾಂಧಿ ಅನರ್ಹತೆಯನ್ನು ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿದೆ. ಆ ಮೂಲಕ ಶಿಕ್ಷೆಯನ್ನು ಅಮಾನತುಗೊಳಿಸುವಂತೆ ರಾಹುಲ್ ಗಾಂಧಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ವಜಾಗೊಳಿಸಿದೆ.

ಸಧ್ಯ ಅನರ್ಹತೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯವರು ಸುಪ್ರೀಂಕೋರ್ಟ್ ಮೆಟ್ಟಿಲೇರಬಹುದು. ಸುಪ್ರೀಂಕೋರ್ಟ್ ಮೂಲಕ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ.

Related Articles

ಇತ್ತೀಚಿನ ಸುದ್ದಿಗಳು