Thursday, August 29, 2024

ಸತ್ಯ | ನ್ಯಾಯ |ಧರ್ಮ

ಗುಜರಾತ್: ಮುಂದುವರೆದ ಮಳೆ ಅನಾಹುತ, ನಾಲ್ಕು ದಿನದಲ್ಲಿ 28 ಮಂದಿ ಸಾವು

ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ಗುಜರಾತ್‌ನಲ್ಲಿ ಮಳೆ ಮುಂದುವರಿದಿದೆ. ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಸೌರಾಷ್ಟ್ರದ ಇಡೀ ಪ್ರದೇಶವೇ ಸಂಕಷ್ಟಕ್ಕೆ ಸಿಲುಕಿದೆ.

ರಾಜ್ಯದ ಪ್ರಮುಖ ನದಿಗಳು ಮತ್ತು ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಐದನೇ ದಿನವಾದ ಗುರುವಾರವೂ ಮಳೆ ಮುಂದುವರಿಯಲಿದೆ. ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಜ್ಯಾದ್ಯಂತ 28 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ಮೊರ್ಬಿ, ವಡೋದರಾ, ಬರೂಚ್, ಜಾಮ್‌ನಗರ, ಅರಾವಳಿ, ಪಂಚಮಹಲ್, ದ್ವಾರಕಾ ಮತ್ತು ದಂಗ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಅದೇ ರೀತಿ ಆನಂದ್‌ನಲ್ಲಿ ಆರು ಮತ್ತು ಅಹಮದಾಬಾದ್‌ನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಗಾಂಧಿನಗರ, ಖೇಡಾ, ಮಹಿಸಾಗರ್, ದಾಹೋದ್ ಮತ್ತು ಸುರೇಂದ್ರನಗರ ಜಿಲ್ಲೆಗಳಲ್ಲಿ ತಲಾ ಇಬ್ಬರು ಸೇರಿ ಒಟ್ಟು 28 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಅಧಿಕಾರಿಗಳು ಸುಮಾರು 18,000 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದ್ದಾರೆ.

ಈ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿವೆ. ರಸ್ತೆಗಳು ಮತ್ತು ರೈಲುಮಾರ್ಗಗಳು ಜಲಾವೃತಗೊಂಡಿದ್ದರಿಂದ ಸಂಚಾರ ಅಸ್ತವ್ಯಸ್ತವಾಗಿದೆ. ಹಲವು ರೈಲುಗಳನ್ನು ಅಧಿಕಾರಿಗಳು ರದ್ದುಗೊಳಿಸಿದ್ದಾರೆ.

ಮತ್ತೊಂದೆಡೆ, ಭಾರತೀಯ ವಾಯುಪಡೆ, ಭಾರತೀಯ ಕೋಸ್ಟ್ ಗಾರ್ಡ್, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ದೇವಭೂಮಿ ದ್ವಾರಕಾ, ಆನಂದ್, ವಡೋದರಾ, ಖೇಡಾ, ಮೊರ್ಬಿ ಮತ್ತು ರಾಜ್‌ಕೋಟ್ ಸೇರಿದಂತೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಪರಿಹಾರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿವೆ.

ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಿಟ್ಟಿನಲ್ಲಿ 11 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು 22 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page