Home ರಾಜ್ಯ ಚಾಮರಾಜನಗರ ಗುಂಡ್ಲುಪೇಟೆ : ಬರಿಗೈಯಲ್ಲೇ ಚರಂಡಿ ಸ್ವಚ್ಛತೆ – ಸಾರ್ವಜನಿಕರ ಆಕ್ರೋ಼ಶ

ಗುಂಡ್ಲುಪೇಟೆ : ಬರಿಗೈಯಲ್ಲೇ ಚರಂಡಿ ಸ್ವಚ್ಛತೆ – ಸಾರ್ವಜನಿಕರ ಆಕ್ರೋ಼ಶ

ಗುಂಡ್ಲುಪೇಟೆ : ತಾಲೂಕಿನ ದೊಡ್ಡತುಪ್ಪೂರು ಗ್ರಾಮದಲ್ಲಿ ಸ್ವಚ್ಛತಾ ಕಾರ್ಮಿಕರನ್ನು ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಚರಂಡಿ ಸ್ವಚ್ಛತೆಗೆ ನಿಯೋಜಿಸಿರುವುದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.ಶಿಂಡನಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡತುಪ್ಪೂರು ಗ್ರಾಮದಲ್ಲಿ ಚರಂಡಿ ಸ್ವಚ್ಛತಾ ಕಾರ್ಯದ ವೇಳೆ ಕಾರ್ಮಿಕರು ಕೈಗವಸು, ಶೂ, ಮಾಸ್ಕ್ ಸೇರಿದಂತೆ ಅಗತ್ಯ ಸುರಕ್ಷತಾ ಪರಿಕರಗಳಿಲ್ಲದೆ ಬರಿಗೈಯಲ್ಲೇ ಕೆಲಸ ನಿರ್ವಹಿಸುತ್ತಿರುವ ದೃಶ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸ್ವಚ್ಛತಾ ಕಾರ್ಮಿಕರಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸುವುದು ಸಂಬಂಧಪಟ್ಟ ಇಲಾಖೆಯ ಜವಾಬ್ದಾರಿಯಾಗಿದೆ. ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಚರಂಡಿ ಸ್ವಚ್ಛತೆ ವೇಳೆ ಕಾರ್ಮಿಕರಿಗೆ ಕೈಗವಸು, ಸುರಕ್ಷತಾ ಶೂ, ಮಾಸ್ಕ್ ಸೇರಿದಂತೆ ಅಗತ್ಯ ರಕ್ಷಣಾತ್ಮಕ ಉಪಕರಣಗಳನ್ನು ಒದಗಿಸಬೇಕು. ಆದರೆ ಇಲ್ಲಿ ಕನಿಷ್ಠ ಸುರಕ್ಷತಾ ಕ್ರಮಗಳನ್ನೂ ಪಾಲಿಸದೆ ಕಾರ್ಮಿಕರಿಂದ ಕೆಲಸ ಮಾಡಿಸಲಾಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಕಾರ್ಮಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಶೀಲನೆ ನಡೆಸಿ ಅಗತ್ಯ ರಕ್ಷಣಾತ್ಮಕ ಪರಿಕರಗಳನ್ನು ಒದಗಿಸಬೇಕು ಹಾಗೂ ನಿರ್ಲಕ್ಷ್ಯ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಶಶಿಕುಮಾರ್.ಎಂ ಆಗ್ರಹಿಸಿದ್ದಾರೆ.

You cannot copy content of this page

Exit mobile version