Home ಬ್ರೇಕಿಂಗ್ ಸುದ್ದಿ ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು; ರೌಡಿಶೀಟರ್ ಬರ್ಬರ ಹತ್ಯೆ

ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು; ರೌಡಿಶೀಟರ್ ಬರ್ಬರ ಹತ್ಯೆ

0

ವಿಜಯಪುರದಲ್ಲಿ ಇಂದು ಬೆಳಗ್ಗೆ ಗುಂಡಿನ ಸದ್ದು ಕೇಳಿಬಂದಿದ್ದು, ದುಷ್ಕರ್ಮಿಗಳು ರೌಡಿಶೀಟರ್ ಭೀಮನಗೌಡ ಬೀರಾದಾರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್ ಆಗಿದ್ದರು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ರೌಡಿಶೀಟರ್ ಸಾವನ್ನಪ್ಪಿದ್ದಾನೆ..

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು.

ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ರೌಡಿಶೀಟರ್ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಭೀಮನಗೌಡಗೆ 3 ಸುತ್ತು ಗುಂಡು ಹಾರಿಸಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದರು. ಹೇರ್ ಕಟಿಂಗ್ ಮಾಡಿಸಿಕೊಳ್ಳುವಾಗ ಕಣ್ಣಿಗೆ ಖಾರದ ಪುಡಿ ಎರಚಿ ಕೃತ್ಯ ನಡೆಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

You cannot copy content of this page

Exit mobile version