ಮಹಿಳಾ ಬೈಕರ್‌ಗೆ ಕಾರು ಡಿಕ್ಕಿ ಹೊಡೆಸಿದ ಕಬಡ್ಡಿ ಆಟಗಾರ: ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿಲ್ಲ ಎಂದ ಆರೋಪಿ

ಹರಿಯಾಣದ ಗುರುಗ್ರಾಮದಲ್ಲಿ ಮಹಿಳಾ ಬೈಕರ್‌ ಒಬ್ಬರಿಗೆ ಕೆಲವರು ಕಾರಿನಿಂದ ಡಿಕ್ಕಿ ಹೊಡೆದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಘಟನೆಯಲ್ಲಿ ಆರೋಪಿಯ ನಡವಳಿಕೆಗೆ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಆತನನ್ನು ತಕ್ಷಣವೇ ಬಂಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಕಾರಿನಿಂದ ಡಿಕ್ಕಿ ಹೊಡೆದ ಆರೋಪಿಯನ್ನು ಕಲ್ಯಾಣ್ ಬೈನ್ಸ್ಲಾ ಎಂಬ ಯುವಕ ಎಂದು ಗುರುತಿಸಲಾಗಿದೆ. ಘಟನೆಯ ವಿವರ ಇಂತಿದೆ:

ಗುರುಗ್ರಾಮದ ಯುವತಿಯೊಬ್ಬರು ತಮ್ಮ ಸ್ಪೋರ್ಟ್ಸ್ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಕಾರಿನಲ್ಲಿದ್ದ ಕೆಲವರು ಆಕೆಯನ್ನು ಹಿಂಬಾಲಿಸಿದ್ದಾರೆ. ಈ ವೇಳೆ ಆಕೆ ಅವರನ್ನು ತಡೆದು ಎಚ್ಚರಿಸಲು ಪ್ರಯತ್ನಿಸಿದರೂ ಅವರು ಕೇಳಲಿಲ್ಲ. ಸ್ವಲ್ಪ ದೂರ ಸಾಗಿದ ನಂತರ, ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಆಕೆಯ ಬೈಕಿಗೆ ಕಾರಿನಿಂದ ಡಿಕ್ಕಿ ಹೊಡೆದು ಅಲ್ಲಿಂದ ಪರಾರಿಯಾಗಿದ್ದಾರೆ.

ಈ ಇಡೀ ದೃಶ್ಯವು ಬೈಕಿಗೆ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರು ಚಾಲಕ ಬೇಕೆಂದೇ ಬೈಕಿಗೆ ಡಿಕ್ಕಿ ಹೊಡೆದಿರುವುದು ವಿಡಿಯೋದಲ್ಲಿ ಕಂಡುಬರುತ್ತದೆ. ಘಟನೆಯಲ್ಲಿ ಬೈಕ್‌ನಿಂದ ಕೆಳಗೆ ಬಿದ್ದ ಯುವತಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು