Tuesday, July 1, 2025

ಸತ್ಯ | ನ್ಯಾಯ |ಧರ್ಮ

ಎಸ್ಪಿ ಮೊಹಮ್ಮದ್ ಸುಜೀತಾ ವಿರುದ್ಧ ಹೆಚ್.ಡಿ. ರೇವಣ್ಣ ಆಕ್ರೋಶ

ಹಾಸನ : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರವು ಕಳೆದ ಎರಡು ವರ್ಷಗಳಲ್ಲಿ ಜನರಿಗೆ ಉತ್ತಮ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಸರಕಾರದ ಎಲ್ಲಾ ಇಲಾಖೆಗಳಲ್ಲಿ ಲಂಚಗುಳಿತನ, ಭ್ರಷ್ಠಾಚಾರ ಹೆಚ್ಚಾಗಿರುವುದನ್ನು ಹಾಗು ವೈಫಲ್ಯ ಖಂಡಿಸಿ ರಾಜ್ಯ ಸರಕಾರದ ವಿರುದ್ಧ ಜೆಡಿಎಸ್ ಪಕ್ಷದಿಂದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಕೆ.ಎಸ್. ಲತಾ ಕುಮಾರಿ ಅವರಿಗೆ ಮನವಿ ಸಲ್ಲಿಸಿದರು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಜೆಡಿಎಸ್ ಬೃಹತ್ ಪ್ರತಿಭಟನೆ ಎನ್.ಆರ್. ವೃತ್ತಕ್ಕೆ ತೆರಳಿ ಕೆಲ ಸಮಯ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ಆಕ್ರೋಶವ್ಯಕ್ತಪಡಿಸಿ ನಂತರ ಬಿ.ಎಂ. ರಸ್ತೆ ಮೂಲಕ ಜಿಲ್ಲಾಧಿಕಾರಿ ಕಛೇರಿ ಆವರಣಕ್ಕೆ ಬಂದರು. ಇದೆ ವೇಳೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮಾತನಾಡಿ, ಕಾಂಗ್ರೆಸ್ ಸರಕಾರವು ಜನತೆಗೆ ಉತ್ತಮ ಆಡಳಿತ ನೀಡುವಲ್ಲಿ ವಿಫಲವಾಗಿದ್ದು, ಹಗರಣಗಳಲ್ಲಿ ಸರಕಾರ ಮುಳುಗಿದೆ. ಆರ್.ಸಿ.ಬಿ. ವಿಜಯೋತ್ಸವದ ವೇಳೆ ಸರಕಾರದ ವೈಫಲ್ಯದಿಂದ ಹನ್ನೊಂದು ಮಂದಿ ಮರಣಹೊಂದಿದ್ದಾರೆ. ಈ ಜಿಲ್ಲೆಯೊಳಗೆ ಪೊಲೀಸರ ಹಾವಳಿ ಜಾಸ್ತಿಯಾಗಿದೆ. ಬೆಳಿಗ್ಗೆ ಎದ್ದರೆ ಲೂಟಿ, ಕೇಳೋರು ಯಾರೂ ಇಲ್ವಾ? ಲಿಂಗಾಯಿತರ ಮನೆಗೆ ನುಗ್ಗಿ ಹೊಡೆಯಲು ಹೋಗಿದ್ದಾರೆ, ಅವರಿಗೆ ರಕ್ಷಣೆ ಇಲ್ವಾ? ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮದ್ ಸುಜೀತಾ ವಿರುದ್ಧ ಕೆಂಡಾಮಡಲವಾದರು. ಇಲ್ಲಿಗೆ ಕರೆಸಿ ಅವರನ್ನು, ಇಲ್ಲ ಅಂದ್ರೆ ಅಲ್ಲಿಗೆ ಬರ್ತಿವಿ. ಬೇಕಾದರೆ ನಮ್ಮನ್ನು ಒಳಗೆ ಹಾಕಲಿ ನೋಡೋಣ! ಸ್ವಲ್ಪನಾದರೂ ಗೌರವ ಇರಬೇಕು. ಒಂದು ಹೆಣ್ಣು ಹೆಂಗಸು ಎಂದು ಗೌರವ ಕೊಟ್ಟು ಇಲ್ಲಿವರೆಗೆ ತಡ್ಕೊಂಡು ಸುಮ್ಮನಿದ್ವಿ ಎಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ತಾಲೂಕು ಅಧ್ಯಕ್ಷ ಎಸ್. ದ್ಯಾವೇಗೌಡ, ಆಲೂರು ತಾಲೂಕು ಅಧ್ಯಕ್ಷ ಮಂಜೇಗೌಡ, ನಗರಸಭೆ ಉಪಾಧ್ಯಕ್ಷೆ ಹೇಮಾಲತಾ ಕಮಾಲ್ ಕುಮಾರ್, ಹೆಚ್.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ನಾಗರಾಜು, ಅನ್ಸರ್, ಮಾಧ್ಯಮ ಜಿಲ್ಲಾ ವಕ್ತಾರ ರಘು ಹೊಂಗೆರೆ, ನಗರಸಭೆ ಸದಸ್ಯ ರಪೀಕ್ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page