ನಾದಬ್ರಹ್ಮ ಹಂಸಲೇಖಾರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ರಾಜಾಜಿನಗರ ಫಸ್ಟ್ ಬ್ಲಾಕ್ ನಲ್ಲಿ ಇರುವ ಅಪೊಲೋ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಆರೋಗ್ಯದಲ್ಲಿ ಕೊಂಚ ಏರುಪೇರಾದ ಹಿನ್ನೆಲೆಯಲ್ಲಿ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಹಂಸಲೇಖಾರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿರುವ ವೈದ್ಯರು ಯಾವುದೇ ರೀತಿಯಲ್ಲಿ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ, ಚಿಕಿತ್ಸೆಯ ಪ್ರಕ್ರಿಯೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.