ಲೈಂಗಿಕ ಕಿರುಕುಳ ಪ್ರಕರಣ: ಸಿವಿಕ್ ಚಂದ್ರನ್ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿದ ಕೇರಳ ಹೈಕೋರ್ಟ್

ಕೇರಳ: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಿವಿಕ್ ಚಂದ್ರನ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ಪ್ರಶ್ನಿಸಿ ಕೇರಳ ಸರ್ಕಾರ ಮೇಲ್ಮನವಿ ಸಲ್ಲಿಸಿದ ನಂತರ ಕೇರಳ ಹೈಕೋರ್ಟ್ ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿದೆ.

ಈ ಹಿನ್ನಲೆಯಲ್ಲಿ ಸಿವಿಕ್ ಚಂದ್ರನ್‌ನವರು ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ನ್ಯಾಯಾಲಯ ಸೂಚಿಸಿದೆ.

ಆಗಷ್ಟ್‌ 24 ರಂದು ಲೈಂಗಿಕ ಕಿರುಕುಳದ ಆರೋಪಿ ಸಿವಿಕ್ ಚಂದ್ರನ್‌ಗೆ ನಿರೀಕ್ಷಣಾ ಜಾಮೀನು ನೀಡುವ ಕೋಝಿಕ್ಕೋಡ್ ಸೆಷನ್ಸ್ ನ್ಯಾಯಾಲಯದ ಆದೇಶಕ್ಕೆ ಕೇರಳ ಹೈಕೋರ್ಟ್ ತಡೆ ನೀಡಿತ್ತು. ನಂತರ ಅವರ ವಯಸ್ಸನ್ನು ಪರಿಗಣಿಸಿ ಅವರಿಗೆ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಕೋರಿ ರಾಜ್ಯ ಸರ್ಕಾರದಿಂದ ಮೇಲ್ಮನವಿ ಇತ್ಯರ್ಥವಾಗುವವರೆಗೆ ಅವರನ್ನು ಬಂಧಿಸಬಾರದು ಎಂದು ನಿರ್ದೇಶನ ನೀಡಿತ್ತು.

Related Articles

ಇತ್ತೀಚಿನ ಸುದ್ದಿಗಳು