ಹಾಸನದಲ್ಲಿ ಎಸ್‌ಡಿಪಿಐ ಪದಾಧಿಕಾರಿ ಬಂಧನ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಹಾಸನ ಘಟಕದ ಅಧ್ಯಕ್ಷ ಸಿದ್ದಿಕ್ ಆನೆಮಹಲ್ ಅವರನ್ನು ಸೆಪ್ಟೆಂಬರ್ 27 ರಂದು ಹಾಸನ ಪೊಲೀಸರು ಬಂಧಿಸಿದ್ದಾರೆ. ಇಂದು ಮುಂಜಾನೆ ಸಕಲೇಶಪುರದ ಆಚಂಗಿ ಗ್ರಾಮದಲ್ಲಿ ಆತನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ.

ಕ್ರಿಮಿನಲ್ ಪ್ರಕ್ರಿಯೆ ಮತ್ತು ಪ್ರಿವೆಂಟಿವ್ ಆಕ್ಷನ್‌ ರಿಪೋರ್ಟ್ ಅಡಿಯಲ್ಲಿ ಸಿದ್ದಿಕ್ ಆನೆಮಹಲ್ ಅವರನ್ನು ಬಂಧಿಸಿ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ ಎಂದು ಹಾಸನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಪದಾಧಿಕಾರಿಗಳ ಬಂಧನವನ್ನು ವಿರೋಧಿಸಿ ಎಸ್‌ಡಿಪಿಐ ಪ್ರತಿಭಟನೆಗಳನ್ನು ಆಯೋಜಿಸುತ್ತಿದೆ ಎಂಬ ಮಾಹಿತಿಯ ಆಧಾರದ ಮೇಲೆ ಪೊಲೀಸರು ಅವರನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು