Home ರಾಜ್ಯ ಎಲ್ಲರಿಗೂ ಹಾಸನಾಂಬೆಯ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು: ಕೆ. ಎಂ. ಶಿವಲಿಂಗೇಗೌಡ ಸೂಚನೆ

ಎಲ್ಲರಿಗೂ ಹಾಸನಾಂಬೆಯ ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು: ಕೆ. ಎಂ. ಶಿವಲಿಂಗೇಗೌಡ ಸೂಚನೆ

0

ಹಾಸನ: ಐತಿಹಾಸಿಕ ಹಾಗೂ ಪ್ರಸಿದ್ಧ ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ದೇಶಾದ್ಯಂತ ಆಗಮಿಸುವ ಭಕ್ತಾದಿಗಳಿಗೆ ಸುಗಮ ದರ್ಶನದ ವ್ಯವಸ್ಥೆಯನ್ನು ಮಾಡಬೇಕು ಎಂದು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಂ. ಶಿವಲಿಂಗೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಇಂದು ಹಾಸನ ನಗರದ ಹಿಮ್ಸ್ (HIMS) ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ ಹಾಸನಾಂಬ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅಬಕಾರಿ ಸಚಿವರೂ ಆಗಿರುವ ಶಿವಲಿಂಗೇಗೌಡ ಅವರು, ಹಿಂದಿನ ಬಾರಿಗೆ ಹೆಚ್ಚು ಅಚ್ಚುಕಟ್ಟಾಗಿ ಜಾತ್ರೋತ್ಸವ ನಡೆಯುವಂತಾಗಬೇಕು. ​ಜಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಯಾರಿಗೂ ಯಾವುದೇ ರೀತಿಯ ತೊಂದರೆಯಾಗದಂತೆ ನಿಗಾವಹಿಸಬೇಕು ಎಂದರು.


ಎಲ್ಲ ಭಕ್ತರಿಗೆ ಸುಗಮ ದರ್ಶನ ವ್ಯವಸ್ಥೆ, ಕುಡಿಯುವ ನೀರು, ಸ್ವಚ್ಛತೆ, ಸಂಚಾರ ನಿಯಂತ್ರಣ ಹಾಗೂ ಬಿಗಿ ಪೊಲೀಸ್ ಭದ್ರತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹಾಸನಾಂಬ ದೇವಿ ದರ್ಶನ ವಿವರ:
ಅಕ್ಟೋಬರ್‌ 29ರಂದು ಮಧ್ಯಾಹ್ನ 12 ಗಂಟೆಗೆ ಹಾಸನಾಂಬ ದೇಗುಲದ ಬಾಗಿಲು ತೆರೆಯಲಿದೆ. ಅ.31ರಿಂದ ನ. 10ರ ವರೆಗೆ ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ಸಾರ್ವಜನಿಕರಿಗೆ ದೇವಿಯ ದರ್ಶನದ ವ್ಯವಸ್ಥೆ ಮಾಡಲಾಗಿದೆ. ನ. 11ರಂದು ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲನ್ನು ಮುಚ್ಚಲಾಗುತ್ತದೆ.

You cannot copy content of this page

Exit mobile version