Sunday, June 23, 2024

ಸತ್ಯ | ನ್ಯಾಯ |ಧರ್ಮ

ಪೆನ್‌ಡ್ರೈವ್ ಲೈಂಗಿಕ ಹಗರಣ: ಆರೋಪಿ ಬಂಧನಕ್ಕೆ ಆಗ್ರಹಿಸಿ ಮೇ. 30ರಂದು ಹಾಸನ ಚಲೋ

ಮಂಡ್ಯ: ಸಂಸದ ಪ್ರಜ್ವಲ್ ರೇವಣ್ಣ ಅವರ ಡಿಪ್ಲೋಮೆಟಿಕ್ ಪಾಸ್ಪೋರ್ಟ್ ರದ್ದುಪಡಿಸಿ ಅವರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ, ಇದೇ ಮೇ 30ರಂದು ಹಾಸನ ಚಲೋ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್ ವರಲಕ್ಷ್ಮಿ ತಿಳಿಸಿದರು. ಈ ಹೋರಾಟದಲ್ಲಿ ರಾಜ್ಯದ ವಿವಿಧ ಭಾಗದ ಸಾವಿರಾರು ಜನರು ಭಾಗಿಯಾಗಲಿದ್ದಾರೆ.

ಪೆನ್‌ಡ್ರೈವ್ ಪ್ರಕರಣದ ತನಿಖೆಯನ್ನು ವೇಗವಾಗಿ ಮುಗಿಸಬೇಕು. ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಆರೋಪಿಗಳಿಗೆ ಕಠಿಣ ಶಿಕ್ಷೆ ಕೊಡಿಸುವಲ್ಲಿ ಈ ಕೂಡಲೇ ರಾಜ್ಯ ಸರ್ಕಾರ ಕಾರ್ಯಪ್ರವೃತ್ತವಾಗಬೇಕು ಎನ್ನುವದು ಜನಪರ ಹಾಗೂ ಮಹಿಳಾ ಪರ ಸಂಘಟನೆಗಳ ಬೇಡಿಕೆಯಾಗಿದೆ.

ಹಾಸನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರನ್ನೇ ಆರೋಪಿಗಳನ್ನಾಗಿಸುವ ಪ್ರಯತ್ನ ನಡೆಯುತ್ತಿದೆ. ಈ ವಿಷಯದಲ್ಲಿ ಹೆಣ್ಣುಮಕ್ಕಳ ಘನತೆಗೆ ಧಕ್ಕೆಯಾಗದಂತೆ ತನಿಖೆ ನಡೆಸಬೇಕು ಎಂದು ಸಂಘಟನೆಗಳು ಆಗ್ರಹಿಸಿವೆ.

‘ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ ಆರೋಪಿಗಳು ಪ್ರಭಾವಿ ಕುಟುಂಬಕ್ಕೆ ಸೇರಿದ್ದಾರೆ. ಈ ಪ್ರಕರಣದಲ್ಲಿ ಹೆಣ್ಣು ಮಕ್ಕಳ ಘನತೆಗೆ ಧಕ್ಕೆ ಉಂಟು ಮಾಡುವ ಕೆಲಸ ನಡೆಯುತ್ತಿದೆ. ಮತ್ತೊಂದು ಕಡೆಯಲ್ಲಿ ಸಿಬಿಐಗೆ ಹಸ್ತಾಂತರ ಮಾಡುವ ಒತ್ತಡವನ್ನು ಹೇರುವ ಮೂಲಕ ತನಿಖೆಗೆ ದಾರಿ ತಪ್ಪಿಸುವ ಪ್ರಯತ್ನ ನಡೆಯುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಈ ಪ್ರಕರಣದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೂ ಆರೋಪಿ ಎಲ್ಲಿದ್ದರೂ ಆತನನ್ನು ಬಂಧನಕ್ಕೆ ಒಳಪಡಿಸಬೇಕು. ಈ ನಿಟ್ಟಿನಲ್ಲಿ ಜನಜಾಗೃತಿಯ ಭಾಗವಾಗಿ ಹಾಸನ ಚಲೋ ಹಮ್ಮಿಕೊಳ್ಳಲಾಗಿದೆ’ ಎಂದು ಜನಪರ ಸಂಘಟನೆಗಳ ಒಕ್ಕೂಟದ ಸಂಚಾಲಕ ಹಾಗೂ ಕಾರ್ಮಿಕ ಮುಖಂಡರಾದ ಧರ್ಮೇಶ್ ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು