ಹಾಸನ : ಫುಡ್ ಸ್ಟ್ರೀಟ್ ಕ್ಯಾಂಟೀನ್‌ಗಳ ಮೇಲೆ ಆರೋಗ್ಯಾಧಿಕಾರಿಗಳ ದಾಳಿ

ಹಾಸನ: ಆಹಾರ ಇಲಾಖೆ ಅಧಿಕಾರಿಗಳು ನಗರದ ಎಂ.ಜಿ. ರಸ್ತೆ ವ್ಯಾಪ್ತಿಯ ಫುಡ್ ಸ್ಟ್ರೀಟ್‌ನಲ್ಲಿರುವ ಕ್ಯಾಂಟೀನ್‌ಗಳ ಮೇಲೆ ಅಚ್ಚರಿ ಪರಿಶೀಲನೆ ನಡೆಸಿ, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕೆ ಬಳಸಬಾರದು ಎಂದು ಕಟ್ಟುನಿಟ್ಟಾಗಿ ಸೂಚನೆ ನೀಡಿದರು.

ಪರಿಶೀಲನೆ ವೇಳೆ ಕೆಲ ಕ್ಯಾಂಟೀನ್‌ಗಳಲ್ಲಿ ಗೃಹ ಬಳಕೆಯ ಸಿಲಿಂಡರ್‌ಗಳನ್ನು ಬಳಸುತ್ತಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಮಾಲೀಕರಿಗೆ ತಕ್ಷಣವೇ ವಾಣಿಜ್ಯ ಸಿಲಿಂಡರ್‌ಗಳನ್ನು ಮಾತ್ರ ಬಳಕೆ ಮಾಡಬೇಕೆಂದು ಎಚ್ಚರಿಕೆ ನೀಡಲಾಯಿತು. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಸಿದರು. ಈ ದಾಳಿ ಮತ್ತು ಪರಿಶೀಲನೆಯನ್ನು ಆಹಾರ ನಿರೀಕ್ಷಕರಾದ ಜಗನ್ನಾಥ್ ಜಿ.ಪಿ., ಶೋಭಾ ಹಾಗೂ ಯತೀಶ್ ಅವರ ನೇತೃತ್ವದಲ್ಲಿ ನಡೆಸಲಾಯಿತು. ಸಾರ್ವಜನಿಕರ ಆರೋಗ್ಯ ಮತ್ತು ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಈ ರೀತಿಯ ಪರಿಶೀಲನೆಗಳು ಮುಂದುವರಿಯಲಿವೆ ಎಂದು ಇಲಾಖೆ ತಿಳಿಸಿದೆ.

Related Articles

ಇತ್ತೀಚಿನ ಸುದ್ದಿಗಳು