Home ಬ್ರೇಕಿಂಗ್ ಸುದ್ದಿ ಹಾಸನ 2 ಕೋಟಿ ವೆಚ್ಚದ ನೂತನ ಯಂತ್ರೋಪಕರಣಗಳಿಗೆ ಶಾಸಕ ಸ್ವರೂಪ್ ಚಾಲನೆ

ಹಾಸನ 2 ಕೋಟಿ ವೆಚ್ಚದ ನೂತನ ಯಂತ್ರೋಪಕರಣಗಳಿಗೆ ಶಾಸಕ ಸ್ವರೂಪ್ ಚಾಲನೆ

ಹಾಸನ: ಹಾಸನ ನಗರಸಭೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿರುವ ಹಿನ್ನೆಲೆಯಲ್ಲಿ ನಗರ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 15ನೇ ಹಣಕಾಸು ಆಯೋಗದ ಅನುದಾನದಡಿ ಸುಮಾರು ₹2 ಕೋಟಿ ವೆಚ್ಚದಲ್ಲಿ ಖರೀದಿಸಲಾದ ನೂತನ ಜೆಸಿಬಿ ಹಾಗೂ ಕಸ ವಿಲೇವಾರಿ ವಾಹನಗಳಿಗೆ ಶಾಸಕ ಸ್ವರೂಪ್ ಪ್ರಕಾಶ್ ಅವರು ಮಂಗಳವಾರ ಚಾಲನೆ ನೀಡಿದರು.

ನಗರಸಭೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎರಡು ಜೆಸಿಬಿ, ಎರಡು ಟಿಪ್ಪರ್ ಲಾರಿಗಳು ಸೇರಿದಂತೆ ವಿವಿಧ ಸ್ವಚ್ಛತಾ ಯಂತ್ರೋಪಕರಣಗಳಿಗೆ ಪೂಜೆ ಸಲ್ಲಿಸಿ, ಶಾಸಕರು ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸ್ವರೂಪ್ ಪ್ರಕಾಶ್ ಅವರು, ಹಾಸನ ಮಹಾನಗರ ಪಾಲಿಕೆಯಾಗಿ ಬೆಳೆಯುತ್ತಿರುವುದರಿಂದ ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿ ಉಳಿಸಿಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು. ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಬಿಸಾಡದೇ, ಮನೆ ಬಾಗಿಲಿಗೆ ಬರುವ ಪಾಲಿಕೆಯ ಕಸದ ವಾಹನಗಳಿಗೆ ಮಾತ್ರ ನೀಡುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪಾಲಿಕೆಯು ಆಧುನಿಕ ಯಂತ್ರೋಪಕರಣಗಳನ್ನು ಬಳಸಿದರೂ, ಸಾರ್ವಜನಿಕರ ಸಹಕಾರವಿಲ್ಲದೆ ಸಂಪೂರ್ಣ ಸ್ವಚ್ಛತೆ ಸಾಧ್ಯವಿಲ್ಲ. ಆದ್ದರಿಂದ ನಾಗರಿಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಹಾಗೂ ಪಾಲಿಕೆಯ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸ್ವಚ್ಛತಾ ಸಿಬ್ಬಂದಿ ಉಪಸ್ಥಿತರಿದ್ದರು.

You cannot copy content of this page

Exit mobile version