ಅರಕಲಗೂಡು : ತಾಲ್ಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಅರಕಲಗೂಡು :ತಾಲ್ಲೂಕಿನ ಕೊಣನೂರು ಗ್ರಾಮದಲ್ಲಿ ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣ ಹೊಂದಿದ ಘಟನೆ ಸೋಮವಾರ ರಾತ್ರಿ ನಡೆದಿದೆ.
ಕೆರೆಕೋಡಿ ಗ್ರಾಮದ ಅನಿಲ್ (28) ಹಾಗೂ ಹೊನ್ನೇಗೌಡ (30) ಎಂಬವರು ಮೃತ ದುರ್ದೈವಿಗಳು. ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗದಲ್ಲಿ KA-13-F-2164 ನಂ.ದ ಸರ್ಕಾರಿ ಸಾರಿಗೆ ಬಸ್ ಮತ್ತು KA-13-HE-4883 ನೋಂದಣಿ ಸಂಖ್ಯೆಯ ಬೈಕ್ ಮುಖಾಮುಖಿ ಡಿಕ್ಕಿಯಾಗಿವೆ.
ಡಿಕ್ಕಿಯ ರಭಸಕ್ಕೆ ಅನಿಲ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡ ಹೊನ್ನೇಗೌಡ ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತಾದರೂ, ಅಷ್ಟರಲ್ಲೇ ಪ್ರಾಣಬಿಟ್ಟಿದ್ದಾರೆ.
ಅಪಘಾತದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
