Tuesday, October 21, 2025

ಸತ್ಯ | ನ್ಯಾಯ |ಧರ್ಮ

ಹಾಸನಾಂಬ ಉತ್ಸವ : 23 ಲಕ್ಷಕ್ಕೂ ಹೆಚ್ಚು ಭಕ್ತರು 20 ಕೋಟಿ ಆದಾಯ

ಹಾಸನ: ಹಾಸನಾಂಬ ಜಾತ್ರಾ ಮಹೋತ್ಸವ ಯಶಸ್ವಿಯಾಗಿ ಸಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದ್ದಾರೆ.

ಇದುವರೆಗೆ 23 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದಿದ್ದಾರೆ. ₹1000 ಹಾಗೂ ₹300 ರೂ. ವಿಶೇಷ ಟಿಕೆಟ್‌ಗಳು ಮತ್ತು ಲಾಡು ಪ್ರಸಾದ ಮಾರಾಟದ ಮೂಲಕ ಸುಮಾರು ₹20 ಕೋಟಿ ಆದಾಯ ಬಂದಿದೆ ಎಂದು ಅವರು ತಿಳಿಸಿದ್ದಾರೆ.ಇಂದು ಬೆಳಿಗ್ಗೆಯಿಂದ ಭಕ್ತರ ಸಂಖ್ಯೆ ತೀರಾ ಕಡಿಮೆ ಆಗಿದ್ದು, ಇಲ್ಲಿಯವರೆಗೂ 68 ಸಾವಿರಕ್ಕೂ ಹೆಚ್ಚು ಭಕ್ತರು ದೇವಿ ದರ್ಶನ ಪಡೆದಿದ್ದಾರೆ ಎಂದರು.ಭಕ್ತರ ಅತಿಯಾದ ಸಂಖ್ಯೆ ಹಿನ್ನೆಲೆಯಲ್ಲಿ ನಿನ್ನೆ ಪ್ರೋಟೋಕಾಲ್ ಬಂದ್ ಮಾಡಲಾಗಿತ್ತು ಎಂಬುದನ್ನು ಲತಾ ಕುಮಾರಿ ಸ್ಪಷ್ಟಪಡಿಸಿದರು.ಇಂದು ಮತ್ತು ನಾಳೆ ಭಕ್ತರ ಸಂಖ್ಯೆ ಕಡಿಮೆ ಇರುವುದರಿಂದ ಪ್ರೋಟೋಕಾಲ್ ವ್ಯವಸ್ಥೆ ಮುಂದುವರಿಸಿದ್ದರೆ ಭಕ್ತರಿಗೆ ತೊಂದರೆ ಆಗುತ್ತಿರಲಿಲ್ಲ ಎಂದರು.

ಪ್ರೋಟೋಕಾಲ್ ಮುಗಿದ ಮೇಲೂ ಕೆಲವು ಗಣ್ಯರು ಹಾಗೂ ಸ್ವಾಮೀಜಿಗಳು ಪಾಸ್ ಅಥವಾ ₹1000 ರೂ. ಟಿಕೆಟ್ ಮೂಲಕ ದರ್ಶನ ಪಡೆಯುತ್ತಿದ್ದಾರೆ.ಇಂದು ರಾತ್ರಿ 9 ಗಂಟೆಗೆ ಗರ್ಭಗುಡಿ ಬಾಗಿಲು ಪೂಜೆಗಾಗಿ ಮುಚ್ಚಲಾಗುತ್ತದೆ. ನಾಳೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 7 ಗಂಟೆಯವರೆಗೆ ಸಾರ್ವಜನಿಕ ದರ್ಶನ ಇರುತ್ತದೆ. ನಂತರ, ರಾತ್ರಿ 7ರಿಂದ ಮಧ್ಯರಾತ್ರಿ 12ರವರೆಗೆ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ.ನಾಳೆ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವ, ಕೆಂಡೋತ್ಸವ ಹಾಗೂ ರಥೋತ್ಸವ ನಡೆಯಲಿದೆ. ನಾಳೆ ರಾತ್ರಿ 12ರಿಂದ ಗುರುವಾರ ಬೆಳಿಗ್ಗೆ 5ರವರೆಗೆ ಸಾರ್ವಜನಿಕರಿಗೆ ಹಾಗೂ ದೇವಸ್ಥಾನದ ಸುತ್ತಮುತ್ತಲಿನವರಿಗೆ ದರ್ಶನ ವ್ಯವಸ್ಥೆ ಇರುತ್ತದೆ.ಗುರುವಾರ ಬೆಳಿಗ್ಗೆ 5 ಗಂಟೆಯಿಂದ ಸಾರ್ವಜನಿಕ ದರ್ಶನ ಇರುವುದಿಲ್ಲ, ನಂತರ ಶಾಸ್ತ್ರೋಕ್ತವಾಗಿ ಗರ್ಭಗುಡಿ ಬಾಗಿಲು ಮುಚ್ಚಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page