Wednesday, July 3, 2024

ಸತ್ಯ | ನ್ಯಾಯ |ಧರ್ಮ

ಹತ್ರಾಸ್ ಕಾಲ್ತುಳಿತ: ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಉತ್ತರ ಪ್ರದೇಶದ ಹತ್ರಾಸ್, ಯುಪಿಯಲ್ಲಿ ನಡೆದ ಆಧ್ಯಾತ್ಮಿಕ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ 116 ಭಕ್ತರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಆಧ್ಯಾತ್ಮ ಗುರುವಿನ ಕಾಲಡಿಯ ಮಣ್ಣನ್ನು ತೆಗೆದುಕೊಳ್ಳಲು ಉಂಟಾದ ನೂಕುನುಗ್ಗಲಿನಲ್ಲಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ

ಸಿಕಿಂದರಾವ್ ಆಸ್ಪತ್ರೆ ಸೇರಿದಂತೆ ಹಲವೆಡೆ ಮೃತ ದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಎಂದು ವರದಿಯಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

ಮತ್ತೊಂದೆಡೆ, ಘಟನೆಯ ಕುರಿತು ಉತ್ತರ ಪ್ರದೇಶ ಸರ್ಕಾರ ತನಿಖೆಗೆ ಆದೇಶಿಸಿದೆ. ಇದಕ್ಕೂ ಮುನ್ನ ಈ ಘಟನೆಯ ಬಗ್ಗೆ ಹತ್ರಾಸ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಕುಮಾರ್ ಹೇಳಿಕೆ ನೀಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದೇವೆ. ಇದೊಂದು ಖಾಸಗಿ ಕಾರ್ಯಕ್ರಮ. ಉಪವಿಭಾಗಾಧಿಕಾರಿ ಅನುಮತಿ ನೀಡಿದ್ದರು. ಅಧಿಕಾರಿಗಳು ಭದ್ರತಾ ವ್ಯವಸ್ಥೆಯನ್ನಷ್ಟೇ ಮಾಡಿದ್ದಾರೆ. ಆದರೆ ಉಳಿದ ವ್ಯವಸ್ಥೆಗಳನ್ನು ಸಂಘಟಕರು ಮಾಡಿದ್ದರು. ಗಾಯಾಳುಗಳು ಹಾಗೂ ಮೃತರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ನೀಡುವತ್ತ ಗಮನಹರಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದುವರೆಗೆ ಹಲವು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ತರಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ತನಿಖೆಯ ನಂತರ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಇಟಿಎ ಮುಖ್ಯ ವೈದ್ಯಾಧಿಕಾರಿ ಉಮೇಶ್ ತ್ರಿಪಾಠಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮೂವರು ಮಕ್ಕಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹತ್ರಾಸ್ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಚರ್ಚೆಯ ವೇಳೆ ಪ್ರಧಾನಿ ಮೋದಿ ಅವರು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತಿತರರು ವಿಷಾದ ವ್ಯಕ್ತಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು