Home ಬ್ರೇಕಿಂಗ್ ಸುದ್ದಿ ಹಾಸನ ಅವರ ರಕ್ತದಲ್ಲಿ ಹರಿಯುತ್ತಿರುವುದು ಇಟಾಲಿಯನ್ ರಕ್ತ: ಸೋನಿಯಾ ಗಾಂಧಿ ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಅವರ ರಕ್ತದಲ್ಲಿ ಹರಿಯುತ್ತಿರುವುದು ಇಟಾಲಿಯನ್ ರಕ್ತ: ಸೋನಿಯಾ ಗಾಂಧಿ ವಿರುದ್ಧ ಎಚ್‌ಡಿಕೆ ವಾಗ್ದಾಳಿ

0

ಹಾಸನ: ವಂದೇ ಮಾತರಂ ಗೀತೆ ವಿಚಾರವಾಗಿ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದು, ಅವರ ಮೂಲವನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಂಕಿಮಚಂದ್ರ ಚಟರ್ಜಿ ಅವರು ರಚಿಸಿದ ವಂದೇ ಮಾತರಂ ಗೀತೆಗೆ ಎಲ್ಲರೂ ಗೌರವ ನೀಡಬೇಕು ಎಂದು ಪ್ರತಿಪಾದಿಸಿದರು. ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ರವೀಂದ್ರನಾಥ ಟ್ಯಾಗೋರ್ ಅವರಂತಹ ಮಹನೀಯರು ವಂದೇ ಮಾತರಂ ಹಾಡಿದ್ದನ್ನು ಸ್ಮರಿಸಿದ ಅವರು, ರಾಷ್ಟ್ರೀಯ ಗೀತೆಯ ವಿಚಾರದಲ್ಲಿ ಕಾಂಗ್ರೆಸ್ ಇಂತಹ ಸಂಕುಚಿತ ಮನೋಭಾವ ಪ್ರದರ್ಶಿಸಬಾರದು ಎಂದರು.

ಸೋನಿಯಾ ಗಾಂಧಿ ಅವರು ವಂದೇ ಮಾತರಂ ಹಾಡುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಅವರು, “ಸೋನಿಯಾ ಗಾಂಧಿ ಅವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಅವರು ನಮ್ಮ ದೇಶದವರೇ? ಮದುವೆಯ ನಂತರ ಭಾರತಕ್ಕೆ ಬಂದವರು. ಅವರ ರಕ್ತನಾಳಗಳಲ್ಲಿ ಹರಿಯುತ್ತಿರುವುದು ಭಾರತೀಯ ರಕ್ತವಲ್ಲ, ಇಟಾಲಿಯನ್ ರಕ್ತವಲ್ಲವೇ?” ಎಂದು ಪ್ರಶ್ನಿಸಿದರು.

ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಗೀತೆಗೆ ಅಗೌರವ ತೋರುತ್ತಿರುವ ಬೆಳವಣಿಗೆಗಳನ್ನು ಜನರು ಗಮನಿಸುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲಕ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಎಚ್ಚರಿಸಿದರು.

You cannot copy content of this page

Exit mobile version