Home ಬೆಂಗಳೂರು ನೈಸ್ ರಸ್ತೆಯಲ್ಲಿ ಅಕ್ರಮ ಟೋಲ್ ವಸೂಲಿ ತಕ್ಷಣ ನಿಲ್ಲಿಸಿ: ಸಿಎಂಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ...

ನೈಸ್ ರಸ್ತೆಯಲ್ಲಿ ಅಕ್ರಮ ಟೋಲ್ ವಸೂಲಿ ತಕ್ಷಣ ನಿಲ್ಲಿಸಿ: ಸಿಎಂಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಪತ್ರ

0

ಬೆಂಗಳೂರು: ನೈಸ್ (NICE) ರಸ್ತೆಯಲ್ಲಿ ಅಕ್ರಮವಾಗಿ ಟೋಲ್ ಸಂಗ್ರಹಿಸಲಾಗುತ್ತಿದ್ದು, ಇದನ್ನು ತಕ್ಷಣವೇ ನಿಲ್ಲಿಸಬೇಕೆಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಯ ಚೌಕಟ್ಟು ಒಪ್ಪಂದ (FWA) ಮತ್ತು ಯೋಜನಾ ತಾಂತ್ರಿಕ ಒಪ್ಪಂದದ (PTA) ನಿಯಮಗಳನ್ನು ನೈಸ್ ಸಂಸ್ಥೆಯು ಸ್ಪಷ್ಟವಾಗಿ ಉಲ್ಲಂಘಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಪತ್ರದಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ಸರ್ಕಾರವು ವಿಶೇಷ ಕಾಯ್ದೆಯನ್ನು ಜಾರಿಗೆ ತರುವ ಮೂಲಕ ಇಡೀ ಯೋಜನೆಯನ್ನು ತನ್ನ ಸುಪರ್ದಿಗೆ ಪಡೆಯಬೇಕೆಂದು ಒತ್ತಾಯಿಸಿದ್ದಾರೆ.

ಈ ಹಿಂದೆ ಸಚಿವರಾಗಿದ್ದ ಟಿ.ಬಿ. ಜಯಚಂದ್ರ ನೇತೃತ್ವದ ವಿಧಾನಮಂಡಲ ಸದನ ಸಮಿತಿಯ ವರದಿ ಹಾಗೂ ಸಂಪುಟ ಉಪಸಮಿತಿಗಳ ವರದಿಗಳನ್ನು ಉಲ್ಲೇಖಿಸಿರುವ ಅವರು, ಒಪ್ಪಂದದಲ್ಲಿ ಇಲ್ಲದ ಭೂಮಿಯನ್ನು ಅಕ್ರಮವಾಗಿ ಬಳಕೆ ಮಾಡಿಕೊಳ್ಳಲಾಗಿದೆ, ಟೋಲ್ ರಸ್ತೆಗಳನ್ನು ಕಾಂಕ್ರೀಟೀಕರಣ ಮಾಡಿಲ್ಲ, ಮತ್ತು ನಿರ್ವಹಣಾ ಪ್ರದೇಶಗಳು ಹಾಗೂ ಟ್ರಕ್ ಟರ್ಮಿನಲ್‌ಗಳನ್ನು ನಿಯಮಾನುಸಾರ ಅಭಿವೃದ್ಧಿಪಡಿಸಿಲ್ಲ ಎಂದು ಆರೋಪಿಸಿದ್ದಾರೆ. ನೈಸ್ ಕಂಪನಿಯು ಸುಮಾರು 20,000 ಎಕರೆಗೂ ಅಧಿಕ ಬೃಹತ್ ಪ್ರಮಾಣದ ಭೂಮಿಯನ್ನು ಅಕ್ರಮವಾಗಿ ತನ್ನ ವಶದಲ್ಲಿಟ್ಟುಕೊಂಡಿದೆ ಎಂದು ಕುಮಾರಸ್ವಾಮಿ ದೂರಿದ್ದಾರೆ.

You cannot copy content of this page

Exit mobile version