Home ಇನ್ನಷ್ಟು ಕೋರ್ಟು - ಕಾನೂನು Breaking news : ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ HD ರೇವಣ್ಣಗೆ ಜಾಮೀನು ಮಂಜೂರು

Breaking news : ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ HD ರೇವಣ್ಣಗೆ ಜಾಮೀನು ಮಂಜೂರು

0

ಹೊಳೆನರಸೀಪುರದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣಗೆ ಇದೀಗ ಬೆಂಗಳೂರಿನ 42ನೇ ACMM ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಹೊಳೆನರಸೀಪುರ ತಮ್ಮ ನಿವಾಸದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ 42ನೇ ACMM ನ್ಯಾಯಾಲಯದಲ್ಲಿ ನಡೆದ ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ಜಡ್ಜ್ ಜೆ.ಪ್ರೀತ್ ಶಾಸಕ ಎಚ್ ಡಿ ರೇವಣ್ಣಗೆ ಜಾಮೀನು ಮಂಜೂರು ನೀಡಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಯಾಗಿರುವ ಮಾರಿ ಸಚಿವ ಹೆಚ್‍ಡಿ ರೇವಣ್ಣ ಅವರ ಜಾಮಿನ ಅರ್ಜಿ ವಿಚಾರಣೆಯನ್ನು ಕಳೆದೆರಡು ದಿನಗಳಿಂದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆದಿತ್ತು. ಇದೀಗ ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿಸಿ HD ರೇವಣ್ಣಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೆಸರಿಗೆ ರೇವಣ್ಣ ಹಾಗೂ ಪುತ್ರ ಸಂಸದ ಪ್ರಜ್ವಲ್ ರೇವಣ್ಣನವರ ಮೇಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತೆ ಹೇಳಿಕೆಯನ್ನು ಆಧರಿಸಿ ಪೊಲೀಸರು ಪ್ರಜ್ವಲ್ ವಿರುದ್ಧ ಅತ್ಯಾಚಾರ ಸೆಕ್ಷನ್ ಸೇರ್ಪಡೆ ಮಾಡಿದ್ದಾರೆ. ಪ್ರಕರಣದ ಎರಡನೇ ಆರೋಪಿಯಾಗಿರುವ ರೇವಣ್ಣ ಅವರಿಗೆ ಇದೀಗ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

You cannot copy content of this page

Exit mobile version