ಏಕಾದಶಿ ಪೂಜೆಯಂದೇ ಜಾರಿ ಬಿದ್ದ ಹೆಚ್.ಡಿ.ರೇವಣ್ಣ ; ಐಸಿಯುನಲ್ಲಿ ಚಿಕಿತ್ಸೆ

ಮಾಜಿ ಸಚಿವ, ಹಾಲಿ ಶಾಸಕ ಹೆಚ್.ಡಿ ರೇವಣ್ಣ ಇಂದು ಬೆಳಿಗ್ಗೆ ಆಷಾಢ ಏಕಾದಶಿ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ರೇವಣ್ಣ ಅವರ ಪಕ್ಕೆಲುಬಿಗೆ ಬಲವಾದ ಪೆಟ್ಟಾಗಿರುವುದಾಗಿ ತಿಳಿದು ಬಂದಿದೆ.

ಹಾಸನದ ಹೊಳೆನರಸೀಪುರದಲ್ಲಿ ದೇವಸ್ಥಾನಕ್ಕೆ ತೆರಳಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಾಲು ಜಾರಿ ಬಿದ್ದಿದ್ದಾರೆ. ಇದರಿಂದಾಗಿ ಹೆಚ್.ಡಿ ರೇವಣ್ಣ ಅವರ ಪಕ್ಕೆಲುಬಿಗೆ ಪೆಟ್ಟಾಗಿರೋದು ಪರೀಕ್ಷೆಯಿಂದ ತಿಳಿದು ಬಂದಿದೆ.

ಮಾಜಿ ಸಚಿವ ಹೆಚ್.ಡಿ ರೇವಣ್ಣ ಇದೀಗ ಹೊಳೆನರಸೀಪುರದಲ್ಲಿನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಷಾಡ ಏಕಾದಶಿ ಪ್ರಯುಕ್ತ ಅವರು ಉಪವಾಸವಿದ್ದರು ಎನ್ನಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು