Tuesday, January 27, 2026

ಸತ್ಯ | ನ್ಯಾಯ |ಧರ್ಮ

ಬರಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್ 21 : ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಟೀಕೆಗೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮೇಲಿನಂತೆ ಪ್ರತಿಕ್ರಿಯೆ ನೀಡಿದರು.

ಬರಪರಿಹಾರದ ಕಾಮಗಾರಿಗಳಿಗೆ ಎಲ್ಲ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ಸುಮಾರು 800 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರು, ಮೇವು ಸೇರಿದಂತೆ ಇತರೆ ಬರಪರಿಹಾರ ಕಾರ್ಯಗಳಿಗೆ ವಿನಿಯೋಗಿಸಲಾಗುತ್ತದೆ. ಕೇಂದ್ರಸರ್ಕಾರಕ್ಕೆ ಬರಪರಿಹಾರ ಕೋರಿ ಮನವಿ ಸಲ್ಲಿಸಿದ್ದರೂ, ಅಲ್ಲಿಂದ ಯಾವುದೇ ರೀತಿಯ ಪರಿಹಾರ ಇನ್ನೂ ತಲುಪಿಲ್ಲ ಎಂದು ತಿಳಿಸಿದರು.

ನವದೆಹಲಿಯಿಂದ ಪಕ್ಷದ ವರಿಷ್ಠರಾದ ರಣದೀಪ್ ಸುರ್ಜೆವಾಲ ಅವರು ಬೆಂಗಳೂರಿಗೆ ಆಗಮಿಸಿದ್ದು, ಅವರ ನೇತೃತ್ವದಲ್ಲಿ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕೆ ಮೊದಲನೇ ಹಂತದಲ್ಲಿ ಶಾಸಕರನ್ನು ಆಯ್ಕೆ ಮಾಡಲಾಗುವುದು ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page