Monday, August 25, 2025

ಸತ್ಯ | ನ್ಯಾಯ |ಧರ್ಮ

ಹೆಚ್.ಡಿ.ಕೆ ಆರೋಗ್ಯವಾಗಿದ್ದಾರೆ ಆತಂಕ ಪಡಬೇಕಾಗಿಲ್ಲ – ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು : ಕೇಂದ್ರ ಸಚಿವ (Union Minister) ಎಚ್‌.ಡಿ. ಕುಮಾರಸ್ವಾಮಿಯವರ (HD Kumaraswamy) ಆರೋಗ್ಯ (Health) ಚೆನ್ನಾಗಿದ್ದು, ಯಾರೂ ಆತಂಕ ಪಡಬೇಕಿಲ್ಲ. ಎಚ್‌ಡಿಕೆ ತಮ್ಮ ಕೊನೆ ಉಸಿರಿರುವವರೆಗೂ ಜನಸೇವೆಗೆ ಬದುಕನ್ನು ಮುಡಿಪಾಗಿಟ್ಟಿದ್ದಾರೆ ಎಂದು ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ತಿಳಿಸಿದರು. ಕುಮಾರಸ್ವಾಮಿ ಅವರ ಆರೋಗ್ಯ ಹದಗೆಟ್ಟಿದಂತಿದೆ. ಯಾಕಂದ್ರೆ ಅವರ ಫೋಟೋವನ್ನು ನೋಡುತ್ತಿದ್ದರೆ ಕೈಗಳು ಸಣ್ಣದಾಗಿದ್ದು, ಮುಖದಲ್ಲಿ ಕಾಂತಿ ಕಾಣಿಸುತ್ತಿಲ್ಲ. ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ತೀವ್ರ ಚರ್ಚೆಗಳಾಗುತ್ತಿವೆ. ಕುಮಾರಸ್ವಾಮಿ ಅನಾರೋಗ್ಯದ ಬಗ್ಗೆ ಸ್ವತಃ ಪುತ್ರ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಕುಮಾರಸ್ವಾಮಿ ಆರೋಗ್ಯ ಚೆನ್ನಾಗಿದೆ, ಯಾರೂ ಆತಂಕ ಪಡಬೇಕಿಲ್ಲ. ಕೊನೆ ಉಸಿರಿರುವವರೆಗೂ ಜನಸೇವೆಗೆ ಜೀವನ ಮುಡಿಪಿಟ್ಟಿದ್ದಾರೆ. ದೇವೇಗೌಡರು ಸಹ ರಾಜಕೀಯದಿಂದ ವಿಶ್ರಾಂತಿ ತೆಗೆದುಕೊಂಡಿಲ್ಲ. ದೇವೇಗೌಡರ ಕುಟುಂಬಕ್ಕೆ ಜನರೇ ರಾಜಕೀಯ ಶಕ್ತಿ ತುಂಬಿದ್ದಾರೆ. ಅದನ್ನ ಜನರಿಗೆ ವಾಪಸ್ ಧಾರೆ ಎರೆಯುವ ಕೆಲಸ ಮಾಡಬೇಕಿದೆ ಎಂದರು. ಎಚ್​​​​​​​​​ಡಿಕೆ ಅವರ ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾಗಿದ್ದು ಸತ್ಯ. ಆದರೆ ಈಗ ಆರೋಗ್ಯ ಚೇತರಿಕೆಯಾಗುತ್ತಿದೆ. ಇದರ ಮಧ್ಯೆ ಪ್ರತಿನಿತ್ಯ ಇಲಾಖೆಯ ಸಭೆಗಳನ್ನು ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕುಮಾರಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿರುವುದನ್ನು ಒಪ್ಪಿಕೊಂಡರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page