ಮೈಸೂರು: ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಕಮಿಷನ್ ಶೇ.60ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹಾಗೂ ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಕಾಂಗ್ರೆಸ್ ಕಾರ್ಯಕರ್ತರೇ ಒಪ್ಪಿಕೊಂಡಿದ್ದು, ಬಡವರ ಮನೆ ಹಂಚಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದರು.
ಈ ಹಿಂದೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಲಂಚ ವಸೂಲಿ ಮಾಡುತ್ತಿದ್ದು, ಈಗ ನೇರವಾಗಿ ಸೆಕ್ರೆಟರಿಯೇಟ್‌ನಲ್ಲಿರುವ ಸಚಿವರೇ ಲಂಚ ಪಡೆಯುತ್ತಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದರು. ಇದನ್ನು ಸತ್ಯಮೇವ ಜಯತೆ ಎನ್ನುತ್ತೀರಾ ಎಂದು ಪ್ರಶ್ನಿಸಿದರು. ಸರ್ಕಾರದ ಹಣವನ್ನು ಲೂಟಿ ಮಾಡುವ ನಿಮ್ಮ ಗ್ಯಾರಂಟಿಗೆ ಕೊನೆಯಿಲ್ಲವೆ? ಎಂದು ಸರ್ಕಾರವನ್ನು ಪ್ರಶ್ನಿಸಿದರು.