ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಖಾಸಗಿ ಆಸ್ಪತ್ರೆಗಳ ಭದ್ರತೆಗೆ ಸರ್ಕಾರವನ್ನು ಮಧ್ಯೆ ತರಬಾರದು ; ಸುಪ್ರೀಂಕೋರ್ಟ್

PPeepal Media

Peepal Media ಆರೋಗ್ಯ

• 1 ನಿಮಿಷದ ಓದು

ಖಾಸಗಿ ಆಸ್ಪತ್ರೆಗಳ ಭದ್ರತೆಗೆ ಸರ್ಕಾರವನ್ನು ಮಧ್ಯೆ ತರಬಾರದು ; ಸುಪ್ರೀಂಕೋರ್ಟ್

ಭಾರತದಲ್ಲಿ ಖಾಸಗಿ ಆಸ್ಪತ್ರೆಗಳು ಸ್ಪಷ್ಟವಾಗಿ ವ್ಯಾಪಾರಿ ಕೇಂದ್ರಗಳಾಗಿವೆ. ಹಾಗಾಗಿ ಕೆಲವು ಅನಿರೀಕ್ಷಿತ ಸಂದರ್ಭಗಳಲ್ಲಿ ಆಸ್ಪತ್ರೆ ಕಡೆಯಿಂದ ರೋಗಿಯ ಜೀವಹಾನಿ ಅಥವಾ ಇನ್ಯಾವುದೋ ಅನಾಹುತಗಳಾದಾಗ ರೋಗಿಯ ಸಂಬಂಧಿಗಳು ನಡೆಸುವ ನಿಂದನೆ ಮತ್ತು ಕೋಪೋದ್ರಿಕ್ತ ಹಲ್ಲೆಗೆ ಆಯಾ ಆಸ್ಪತ್ರೆಗಳೇ ಭದ್ರತೆ ಒದಗಿಸಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ಪಟ್ಟಿದೆ.

ದೆಹಲಿ ವೈದ್ಯಕೀಯ ಸಂಘ ಸುಪ್ರೀಂಕೋರ್ಟಿಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಎ.ಎಸ್.ಓಕಾ ಅವರ ಜಂಟಿ ನ್ಯಾಯಪೀಠ ಈ ಮೇಲಿನಂತೆ ಅಭಿಪ್ರಾಯ ಪಟ್ಟಿದ್ದಾರೆ. ಕೋವಿಡ್ ನಂತಹ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಉದಾಹರಣೆಯಾಗಿಸಿ ಹೇಳುವುದಾದರೆ ಆಗ ಎಲ್ಲಾ ಆಸ್ಪತ್ರೆಗಳೂ ಒಂದು ರೀತಿಯ ಅಭದ್ರತೆಯಿಂದ ಕೂಡಿತ್ತು. ಯಾರ ಜೀವವೂ ಯಾರ ಕೈಯಲ್ಲೂ ಇರಲಿಲ್ಲ. ಅಂತಹ ಸಂದರ್ಭಗಳ ಹೊರತಾಗಿ ಖಾಸಗಿ ಆಸ್ಪತ್ರೆಗಳು ತಮ್ಮ ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯ ಭದ್ರತೆಯನ್ನು ತಾವೇ ಮಾಡಿಕೊಳ್ಳಬೇಕು. ಬದಲಾಗಿ ಅದರ ಹೊರೆಯನ್ನು ಸರ್ಕಾರಕ್ಕೆ ಕೊಡಬಾರದು ಎಂಬುದಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಖಾಸಗಿ ಆಸ್ಪತ್ರೆ ಸಂಘಗಳ ಪರ ವಕೀಲರು ‘ಎಷ್ಟೋ ರಾಜ್ಯಗಳಲ್ಲಿ ಎಷ್ಟೋ ವೈದ್ಯರು ಹೊರಗಿನ ವ್ಯಕ್ತಿಗಳಿಂದ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ..’ ಎಂಬ ವಾದಕ್ಕೆ, ಅವರ್ಯಾರೂ ಯಾವುದೋ ಭಯೋತ್ಪಾದಕ ಸಂಘಟನೆಗಳವರಲ್ಲ, ಅಥವಾ ಅವರಿಗೂ ವೈದ್ಯರಿಗೂ ಯಾವುದೇ ವಯಕ್ತಿಕ ದ್ವೇಷವೂ ಇರುವುದಿಲ್ಲ. ರೋಗಿಗಳಿಗೆ ಹಾನಿಯಾದಾಗ ರೋಗಿಯ ಸಂಬಂಧಿಕರಾಗಿ ಅವರು ಕೋಪೋದ್ರಿಕ್ತರಾಗುವುದು ಸಹಜ ಪ್ರಕ್ರಿಯೆ. ಇದಕ್ಕೆ ಭದ್ರತೆಯನ್ನು ನೀವೇ ಒದಗಿಸಿಕೊಳ್ಳಬೇಕು ಎಂದು ನ್ಯಾಯಪೀಠ ಹೇಳಿದೆ.

ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಇಲ್ಲಿಯವರೆಗೆ ಈ ರೀತಿಯ ಯಾವುದೇ ಗಂಭೀರ ಸಮಸ್ಯೆ ಎದುರಾಗಿಲ್ಲ. ಅವು ಸರಿಯಾಗಿ ತಮ್ಮ ಕಾರ್ಯ ನಿರ್ವಹಿಸುತ್ತಿವೆ. ಖಾಸಗಿ ಆಸ್ಪತ್ರೆಗಳ ಈ ದೂರಿಗೆ ಕೋರ್ಟ್ ಸರ್ಕಾರವನ್ನು ಮಧ್ಯೆ ತರಲು ಇಚ್ಛಿಸುವುದಿಲ್ಲ. ಇನ್ನು 2021 ರ ಜೂನ್ ನಲ್ಲೇ ಖಾಸಗಿ ಆಸ್ಪತ್ರೆಗಳು ಇಂತಹ ಸಂದರ್ಭಗಳಲ್ಲಿ ಯಾವ ರೀತಿಯ ಭದ್ರತೆ ತಗೆದುಕೊಳ್ಳಬೇಕು ಎಂಬ ನಿರ್ದೇಶನ ನೀಡಿದೆ. ಆ ತೀರ್ಪನ್ನು ಅನುಸರಿಸಿಯೇ ಖಾಸಗಿ ಆಸ್ಪತ್ರೆಗಳು ನಡೆದುಕೊಳ್ಳಬೇಕು ಎಂದು ದೆಹಲಿ ಖಾಸಗಿ ಆಸ್ಪತ್ರೆಗಳ ಸಂಘಕ್ಕೆ ತಿಳಿಸಿದೆ‌.

PPeepal Media

Peepal Media

Peepal Media · ಆರೋಗ್ಯ ವಿಭಾಗ

ಸಂಬಂಧಿತ ಸುದ್ದಿಗಳು