ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸರಣಿ ಸಾವುಗಳು ಜನರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದು, ಈ ನಿಟ್ಟಿನಲ್ಲಿ ಅರಿವು,ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯ ಸರ್ಕಾರ ಕೆಲವು ಪ್ರಮುಖ ಕ್ರಮಗಳಿಗೆ ಮುಂದಾಗಿದ್ದು, ಈ ಪೈಕಿ ಹೃದಯಾಘಾತ ಮತ್ತು ಹೃದಯ ಆರೋಗ್ಯ ರಕ್ಷಣೆಯ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಲು ಮುಂದಾಗಿದೆ.
ಹೀಗಾಗಿ ಮುಂದಿನ ವರ್ಷದಿಂದ ಪಠ್ಯ ಪುಸ್ತಕಗಳಲ್ಲಿ ಹೃದಯಾಘಾತ ಮತ್ತು ಹೃದಯದ ಆರೋಗ್ಯ ರಕ್ಷಣೆಯ ಕುರಿತು ಪಾಠಗಳನ್ನು ಸೇರ್ಪಡೆ ಮಾಡಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಈ ಬಗ್ಗೆ ತಜ್ಞರ ಸಮಿತಿಯ ಶಿಫಾರಸ್ಸುಗಳನ್ನು ಪರಿಗಣಿಸಿ ಸಿಎಂ ಜೊತೆ ಚರ್ಚಿಸಲಾಗುವುದು ಎಂದಿದ್ದಾರೆ.
ಇದರ ಜೊತೆಗೆ ರಾಜ್ಯದಲ್ಲಿ ಇನ್ಮುಂದೆ ಹೃದಯಾಘಾತವನ್ನು ಅಧಿಸೂಚಿತ ಕಾಯಿಲೆ ಎಂದು ಪರಿಣಾಗಿಸುವಂತೆ ಕೂಡ ರಾಜ್ಯ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಅಧಿಸೂಚಿತ ಕಾಯಿಲೆ ಅಂದ್ರೆ ಹೃದಯಾಘಾತದಿಂದ ಸಾವು ಸಂಭವಿಸಿದ ಪ್ರಕರಣಗಳನ್ನು ಕಡ್ಡಾಯವಾಗಿ ಸರ್ಕಾರದ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು ಮತ್ತು ಕಡಾಯ ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.