Home ಬೆಂಗಳೂರು ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ – ಆರೆಂಜ್ ಅಲರ್ಟ್ ಘೋಷಣೆ

ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ – ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಯಿದ್ದು,ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಜುಲೈ 18 ಹಾಗೂ 19 ರಂದು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜುಲೈ 18 ರಂದು ಒಂದೆರಡು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಭೂ ಕುಸಿತವಾಗುವ ಮುನ್ನೆಚ್ಚರಿಕೆಯನ್ನು ಕೂಡಾ ನೀಡಲಾಗಿದೆ.

You cannot copy content of this page

Exit mobile version