Wednesday, June 19, 2024

ಸತ್ಯ | ನ್ಯಾಯ |ಧರ್ಮ

ಉತ್ತರ, ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ, 3 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಶನಿವಾರ ಮತ್ತು ಭಾನುವಾರ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ತೀವ್ರ ಬರದಿಂದ ತತ್ತರಿಸಿರುವ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಒಣಭೂಮಿ ಎಂದು ಪರಿಗಣಿಸಲಾಗಿರುವ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಶನಿವಾರವೂ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಮಧ್ಯ ಕರ್ನಾಟಕ ಜಿಲ್ಲೆ ಚಿತ್ರದುರ್ಗ, ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಚಾಮರಾಜನಗರ, ಹಾಸನ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಕೊಡಗು, ತುಮಕೂರಿನಲ್ಲೂ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ರಾಜಧಾನಿ ಬೆಂಗಳೂರು ನಗರವು ಬೆಳಿಗ್ಗೆಯಿಂದ ಗಿರಿಧಾಮವನ್ನು ಹೋಲತೊಡಗಿದೆ. ಐಟಿ ನಗರದಲ್ಲಿ ಎರಡು ದಿನಗಳಿಂದ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ಭಾರೀ ಮಳೆಗೆ ಹಾನಿಯಾಗಿದೆ.

Related Articles

ಇತ್ತೀಚಿನ ಸುದ್ದಿಗಳು