Home ಬೆಂಗಳೂರು ಇಂದೂ ಕೂಡ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ?

ಇಂದೂ ಕೂಡ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ?

ಬೆಂಗಳೂರು : ಕರ್ನಾಟಕದಲ್ಲಿ (Karnataka)ಮಳೆ(Rain) ಆರ್ಭಟ ಮುಂದುವರಿದಿದೆ. 9ಕ್ಕೂ ಹೆಚ್ಚು ಜಿಲ್ಲೆಯಲ್ಲಿ ವರುಣ ಅಬ್ಬರ ಮುಂದುವರಿಸಿದ್ದಾನೆ. ಅದರಲ್ಲೂ ಕರಾವಳಿ (coastal Karnataka) ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾರ್ಭಟ ಹೆಚ್ಚಾಗಿದ್ದು, ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ.ಮುಂದಿನ 4-5ದಿನ ಮಳೆ (Rain Alert ) ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (Weather Forecast ) ಮುನ್ಸೂಚನೆ ನೀಡಿದೆ.

ಇನ್ನು, ಹವಾಮಾನ ಇಲಾಖೆ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಆಲರ್ಟ್ ಘೋಷಣೆ ಮಾಡಿದೆ. ಉಳಿದಂತೆ ರಾಜ್ಯಾದ್ಯಂತ ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಶಾಲಾ ಕಾಲೇಜಿಗೆ ರಜೆ ಘೋಷಣೆ

ಹಾಸನದ ಸಕಲೇಶಪುರ, ಬೇಲೂರು ತಾಲೂಕಿನ ಶಾಲೆಗಳಿಗೆ ಇವತ್ತು ರಜೆ ನೀಡಲಾಗಿದೆ. ಕಳೆದ 2 -3 ದಿನಗಳಿಂದ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಿ ಹಾಸನ ಜಿಲ್ಲಾಧಿಕಾರಿ ಲತಾಕುಮಾರಿ ಆದೇಶಿಸಿದ್ದಾರೆ.

ಹಾಗೆಯೇ, ಉತ್ತರ ಕನ್ನಡ ಜಿಲ್ಲೆಯಲ್ಲೂ ಸಹ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ಉಳಿದಂತೆ ಚಿಕ್ಕಮಗಳೂರು ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಮತ್ತೊಂದೆಡೆ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಹೊಸನಗರ, ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಕಾಲೇಜಿಗೆ ರಜೆ ಘೋಷಿಸಿದ್ದು, ಕೊಡಗು ಜಿಲ್ಲೆಗೂ ಸಹ ರಜೆ ಘೋಷಣೆ ಮಾಡಲಾಗಿದೆ.

ಒಟ್ಟಿನಲ್ಲಿ ಜುಲೈ 29ರವರೆಗೂ ಕರುನಾಡಿನ ಹಲವೆಡೆ ಮಳೆ ಮುಂದುವರಿಯಲಿದ್ದು, ವಿಪರೀತ ಚಳಿ ಹಾಗೂ ಶೀತಗಾಳಿ ಜತೆಗೆ ಮಳೆಗೆ ಜನರನ್ನು ಹಿಂಡಿ ಹಿಪ್ಪೇಕಾಯಿ ಮಾಡಿದೆ.

You cannot copy content of this page

Exit mobile version