ಹವಾಮಾನ ಪರಿಸ್ಥಿತಿಯಲ್ಲಿ ಕಂಡುಬಂದ ಹಠಾತ್ ಬದಲಾವಣೆಯಿಂದಾಗಿ ಹಿಮಾಚಲ ಪ್ರದೇಶದಲ್ಲಿ ತೀವ್ರ ಗುಡುಗು ಸಹಿತ ಮಳೆಯಾಗಿದೆ. ಇದರಿಂದಾಗಿ ಬೃಹತ್ ಮರಗಳು ನೆಲಕ್ಕೆ ಉರುಳಿದವು. ಇದಲ್ಲದೆ, ಬೆಟ್ಟಗಳಿಂದ ದೊಡ್ಡ ಬಂಡೆಗಳು ಉರುಳಿ ಕಾರುಗಳ ಮೇಲೆ ಬಿದ್ದವು.
ಪರಿಣಾಮವಾಗಿ ಅನೇಕ ವಾಹನಗಳು ಹಾನಿಗೊಳಗಾದವು. ಮಣಿಕರಣ್ ಗುರುದ್ವಾರದ ಮುಂಭಾಗದ ರಸ್ತೆಬದಿಯಲ್ಲಿ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಆರು ಜನರು ಸಾವಿಗೀಡಾಗಿದ್ದಾರೆ. ಭೂಕುಸಿತಗಳು ಸಹ ಸಂಭವಿಸಿವೆ. ಎಚ್ಚೆತ್ತ ಅಧಿಕಾರಿಗಳು ಪರಿಹಾರ ಕ್ರಮಗಳನ್ನು ಕೈಗೊಂಡರು.
ಭಾನುವಾರ ಬೀಸಿದ ಬಲವಾದ ಗಾಳಿಗೆ ಮರಗಳು ಧರೆಗುರುಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಮಾಚಲ ಪ್ರದೇಶದ ಕುಲ್ಲುವಿನ ಮಣಿಕರಣ್ ಗುರುದ್ವಾರದ ಪಾರ್ಕಿಂಗ್ ಸ್ಥಳದ ಬಳಿ ವಾಹನಗಳು ಮತ್ತು ಕಿರಾಣಿ ಅಂಗಡಿಗಳ ಮೇಲೆ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಆರು ಜನರು ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಐದು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಾರಿಯಲ್ಲಿರುವ ಸ್ಥಳೀಯ ಸಮುದಾಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.
ಈ ವಾರದ ಆರಂಭದಲ್ಲಿ ಗುಡುಗು ಸಹಿತ ಮಳೆ ಮತ್ತು ಬಲವಾದ ಗಾಳಿ
ಬೀಸಬಹುದೆಂದು ಮುಂಚಿತವಾಗಿ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಅದು ಹೇಳಿದೆ.