Thursday, November 28, 2024

ಸತ್ಯ | ನ್ಯಾಯ |ಧರ್ಮ

ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ ಸೋರೆನ್ ಪ್ರಮಾಣ ವಚನ ಸ್ವೀಕಾರ

ರಾಂಚಿ: ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಹೇಮಂತ್ ಸೊರೆನ್ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರಿಗೆ ಸ್ಥಳೀಯ ಮೊರಬಾಡಿ ಮೈದಾನದಲ್ಲಿ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಪ್ರಮಾಣ ವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಆಪ್ ನಾಯಕ ಕೇಜ್ರಿವಾಲ್ ಮತ್ತು ಅವರ ಪತ್ನಿ ಸುನೀತಾ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಭಾಗವಹಿಸಿದ್ದರು. ಜೆಎಂಎಂ ಅಧ್ಯಕ್ಷ ಹೇಮಂತ್ ಸೊರೇನ್ ಮುಖ್ಯಮಂತ್ರಿಯಾಗಿ ನಾಲ್ಕನೇ ಬಾರಿ ಅಧಿಕಾರ ಸ್ವೀಕರಿಸಿದ್ದಾರೆ.

ಪ್ರಮಾಣವಚನ ಸ್ವೀಕರಿಸುವ ಮೊದಲು, ಹೇಮಂತ್ ಸೊರೆನ್ ಅವರು ಜಾರ್ಖಂಡ್ ಜನರ ಪಾಲಿಗೆ ಏಕತೆ ಒಂದು ದೊಡ್ಡ ಅಸ್ತ್ರ ಮತ್ತು ಅದನ್ನು ಮುರಿಯಲು ಅಥವಾ ದಬ್ಬಾಳಿಕೆ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕ್ರಾಂತಿಯನ್ನು ಹತ್ತಿಕ್ಕಲು ಯತ್ನಿಸಿದಷ್ಟೂ ವೇಗವಾಗಿ ಸ್ಫೋಟಗೊಳ್ಳಲಿದೆ ಎಂದು ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಜಾರಕಿಹೊಳಿಯವರು ಯಾರ ಮುಂದೆಯೂ ತಲೆಬಾಗುವುದಿಲ್ಲ, ಕೊನೆಯವರೆಗೂ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೊರೆನ್ ಅವರು ಬಿಜೆಪಿ ನಾಯಕ ಗ್ಯಾಮ್ಲಿಯೆಲ್ ಹೆಂಬ್ರೋಮ್ ಅವರನ್ನು 39,791 ಮತಗಳ ಅಂತರದಿಂದ ಸೋಲಿಸುವ ಮೂಲಕ ಬರ್ಹೈತ್ ಸ್ಥಾನವನ್ನು ಉಳಿಸಿಕೊಂಡರು. 81 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ ಜೆಎಂಎಂ ಮೈತ್ರಿಕೂಟ 56 ಸ್ಥಾನಗಳನ್ನು ಗಳಿಸಿದರೆ, ಎನ್‌ಡಿಎ ಕೇವಲ 24 ಸ್ಥಾನಗಳನ್ನು ಗೆದ್ದುಕೊಂಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page