Thursday, November 28, 2024

ಸತ್ಯ | ನ್ಯಾಯ |ಧರ್ಮ

ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ಇಂದು ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ

ರಾಂಚಿ: ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಜೆಎಂಎಂ ಮುಖ್ಯಸ್ಥ ಹೇಮಂತ್ ಸೊರೆನ್ ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್ ಅವರು ಪ್ರಮಾಣ ವಚನ ಬೋಧಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎನ್‌ಸಿಪಿ-ಎಸ್‌ಪಿ ಮುಖ್ಯಸ್ಥ ಶರದ್ ವಾವಾರ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ, ಪಂಜಾಬ್ ಸಿಎಂ ಭಗವಂತ್ ಮಾನ್, ಹಿಮಾಚಲ ಪ್ರದೇಶ ಸಿಎಂ ಸುಖವಿಂದರ್ ಸಿಂಗ್ ಸುಖು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ.

ಹೇಮಂತ್ ಸೊರೇನ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಇದು ನಾಲ್ಕನೇ ಬಾರಿ. ಈ ಬಾರಿಯ ಚುನಾವಣೆಯಲ್ಲಿ ರಾಜ್ಯದ 81 ಕ್ಷೇತ್ರಗಳ ಪೈಕಿ ಜೆಎಂಎಂ ಮೈತ್ರಿಕೂಟ 56 ಹಾಗೂ ಎನ್‌ಡಿಎ ಮೈತ್ರಿಕೂಟ 24 ಸ್ಥಾನಗಳನ್ನು ಗೆದ್ದಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page