ನವದೆಹಲಿ: ಆರ್‌ಎಸ್‌ಎಸ್ ಸಭೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ಇದ್ದ ನಿಷೇಧವನ್ನು ತೆಗೆದು ಹಾಕಿರುವುದಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡ ಜೈರಾಮ್ ರಮೇಶ್ ವಿರೋಧ ವ್ಯಕ್ತಪಡಿಸಿದ್ದಾರೆ.
ಭಾರತದಲ್ಲಿ ಈ ಹಿಂದೆ ನಿಷೇಧಗೊಂಡಿದ್ದ RSSನ ಸಭೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ಅವರು, ಇನ್ನು ಮುಂದೆ ಸರ್ಕಾರಿ ಅಧಿಕಾರಿಗಳು RSS ಚಡ್ಡಿ ಹಾಕ್ಕೊಂಡು ಕಚೇರಿಗೆ ಬರಬಹುದು ಎಂದು ವ್ಯಂಗ್ಯವಾಡಿದ್ದಾರೆ.
ಜುಲೈ 9 ರಂದು ಕೇಂದ್ರ ಸರ್ಕಾರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದೆ ಎನ್ನಲಾದ ಆದೇಶ ಪ್ರತಿಯ ಫೋಟೋವನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿದಾರೆ.
RSSನ ದುಷ್ಕೃತ್ಯಗಳನ್ನು ಮನಗಂಡು 1948ರ ಫೆಬ್ರವರಿಯಲ್ಲಿ ಗಾಂಧೀಜಿಯವರ ಹತ್ಯೆಯ ನಂತರ ಸರ್ದಾರ್ ಪಟೇಲ್ ಆರಈ ಸಂಘಟನೆಯನ್ನು ನಿಷೇಧಿಸಿದ್ದರು. ನಂತರದ ದಿನಗಳಲ್ಲಿ ಉತ್ತಮ ನಡವಳಿಕೆಯ ಭರವಸೆಯ ಮೇಲೆ ನಿಷೇಧವನ್ನು ಹಿಂತೆಗೆದುಕೊಳ್ಳಲಾಗಿತ್ತು. ಇದಾದ ನಂತರವೂ ಆರ್‌ಎಸ್‌ಎಸ್ ನಾಗಪುರದಲ್ಲಿ ತಿರಂಗವನ್ನು ಹಾರಿಸಿರಲಿಲ್ಲ. ಹೀಗಾಗಿ 1966 ರಲ್ಲಿ, ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸುವುದಂತೆ ನಿಷೇಧ ಹೇರಲಾಗಿತ್ತು ಎಂದು ಅವರು ಬರೆದುಕೊಂಡಿದ್ದಾರೆ.
ಬಿಜೆಪಿ ಪಕ್ಷದ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗಲೂ ಜಾರಿಯಲ್ಲಿದ್ದ ಈ ಕಾನೂನು ಜಾರಿಯಲ್ಲಿತ್ತು. 58 ವರ್ಷಗಳ ನಿಷೇಧವನ್ನು ಈಗ ಮೋದಿ ಸರ್ಕಾರ ತೆಗೆದು ಹಾಕಿದೆ. ಇನ್ನು ಮುಂದೆ ಅಧಿಕಾರಿಗಳು ಚೆಡ್ಡಿ ತೊಟ್ಟು ಬರಬಹುದು ಎಂಬುವುದು ನನ್ನ ಭಾವನೆ” ಎಂದು ಬರೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ ಮಾಧ್ಯಮ ಹಾಗೂ ಪ್ರಚಾರ ವಿಭಾಗದ ಮುಖ್ಯಸ್ಥ ಪವನ್ ಖೇರಾ ಕೂಡಾ ಸರ್ಕಾರದ ಕ್ರಮವನ್ನು ವಿರೋಧಿಸಿದ್ದಾರೆ.