ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಮತ್ತು ಮಂಡಿ ಜಿಲ್ಲೆಗಳಿಂದ ದುರಂತದ ಸುದ್ದಿ ಬರುತ್ತಿದೆ. ಇಲ್ಲಿನ ಶಿಮ್ಲಾ ಜಿಲ್ಲೆಯ ರಾಂಪುರ ಪ್ರದೇಶದ ಸಮೇಜ್ ಖಾಡ್ ಪ್ರದೇಶದಲ್ಲಿ ಮೇಘಸ್ಪೋಟ ಉಂಟಾಗಿದೆ. ಇದರೊಂದಿಗೆ, ಮಂಡಿಯ ಪಾಧಾರ್ ಉಪವಿಭಾಗದ ತಾಲ್ತುಖೋಡ್ ಪ್ರದೇಶದಲ್ಲಿ ಮೇಘಸ್ಫೋಟವು ಭಾರಿ ವಿನಾಶವನ್ನು ಉಂಟುಮಾಡಿದೆ.
ಈ ಎರಡೂ ಜಿಲ್ಲೆಗಳಲ್ಲಿ ಮೇಘಸ್ಫೋಟದಿಂದಾಗಿ ಒಟ್ಟು 28 ಮಂದಿ ನಾಪತ್ತೆಯಾಗಿದ್ದಾರೆ. ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲಾಗುತ್ತಿದೆ.
ಸುದ್ದಿಗಳ ಪ್ರಕಾರ , ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರಾಮ್‌ಪುರ ಪ್ರದೇಶದ ಸಮೇಜ್ ಖಾಡ್ ಪ್ರದೇಶದಲ್ಲಿ ಗುರುವಾರ ಮೇಘಸ್ಫೋಟ ಸಂಭವಿಸಿದೆ. ಈ ದುರಂತದ ನಂತರ 19 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಎಸ್‌ಡಿಆರ್‌ಎಫ್ ತಂಡವು ಸ್ಥಳಕ್ಕೆ ತೆರಳಿದೆ ಎಂದು ಶಿಮ್ಲಾ ಉಪ ಆಯುಕ್ತ (ಡಿಸಿ) ಅನುಪಮ್ ಕಶ್ಯಪ್ ಹೇಳಿದ್ದಾರೆ.
ಮತ್ತೊಂದೆಡೆ, ಹಿಮಾಚಲ ಪ್ರದೇಶದ ಮಂಡಿಯ ಪಾಧಾರ್ ಉಪವಿಭಾಗದ ತಾಲ್ತುಖೋಡ್‌ನಲ್ಲಿ ಮೇಘಸ್ಫೋಟವಾಗಿದೆ. ಈ ಅಪಘಾತದಲ್ಲಿ 9 ಮಂದಿ ನಾಪತ್ತೆಯಾಗಿದ್ದಾರೆ. ಅದೇ ಸಮಯದಲ್ಲಿ, ಒಬ್ಬ ವ್ಯಕ್ತಿ ಕೂಡ ಸಾವನ್ನಪ್ಪಿದ್ದು, ಅವರ ದೇಹ ದೊರೆತಿದೆ. ಘಟನೆಯಿಂದಾಗಿ ಮನೆಗಳಿಗೂ ಹಾನಿಯಾಗಿದೆ. ಜಿಲ್ಲಾಡಳಿತ ಮತ್ತು ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ತೆರಳಿದೆ ಎಂದು ಮಂಡಿ ಜಿಲ್ಲಾಧಿಕಾರಿ ಅಪೂರ್ವ ದೇವಗನ್ ತಿಳಿಸಿದ್ದಾರೆ.