Friday, September 26, 2025

ಸತ್ಯ | ನ್ಯಾಯ |ಧರ್ಮ

ಬೈಕ್ ಟ್ಯಾಕ್ಸಿ ಸೇವೆ ನಿರ್ಬಂಧ ಹೈಕೋರ್ಟ್‌ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ

ಬೆಂಗಳೂರು: ಬೈಕ್ ಟ್ಯಾಕ್ಸಿ (Bike Taxi) ಸಂಬಂಧ ನೀತಿ ಬಗ್ಗೆ ಹೈಕೋರ್ಟ್‌ (High Court) ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ನಿಗದಿಪಡಿಸಲು ಒಂದು ತಿಂಗಳು ಸಮಯ ನೀಡಿದ್ದರೂ ಸರ್ಕಾರ ಈವರೆಗೆ ನೀತಿ ರೂಪಿಸದ ಬಗ್ಗೆ ಕರ್ನಾಟಕ ಹೈಕೋರ್ಟ್ ಅಸಮಾಧಾನ ಹೊರಹಾಕಿದೆ. ಸರ್ಕಾರದ ನಿರ್ಬಂಧಕ್ಕೆ ತಡೆ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದಿರುವ ಕೋರ್ಟ್, ಬೈಕ್ ಟ್ಯಾಕ್ಸಿ ಬಗ್ಗೆ ನಿಮ್ಮ ವಾದ ಮಂಡಿಸಿ. ಆ ಬಳಿಕ ಆದೇಶ ಹೊರಡಿಸುವುದಾಗಿ ತಿಳಿಸಿದೆ. ಹೀಗಾಗಿ ಸರ್ಕಾರದ ನಿರ್ಬಂಧಕ್ಕೆ ತಡೆ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಹೈಕೋರ್ಟ್ ಹೇಳಿದೆ. ಬೈಕ್ ಟ್ಯಾಕ್ಸಿ ಬಗ್ಗೆ ನಿಮ್ಮ ವಾದ ಮಂಡಿಸಿ. ಮುಂದಿನ ವಿಚಾರಣೆಯನ್ನ ಅಕ್ಟೋಬರ್ 15ಕ್ಕೆ ನಿಗದಿಪಡಿಸಿದೆ.

ಒಂದು ತಿಂಗಳಾದ್ರೂ ನೀತಿ ರೂಪಿಸಿಲ್ಲ
ಬೈಕ್‌ ಗಳನ್ನು ಡೆಲಿವರಿಗಾಗಿ ಮಾತ್ರ ಬಳಸಲು ಅವಕಾಶ ನೀಡಲಾಗಿದ್ದು, ಬೈಕ್‌ ನಲ್ಲಿ ಪ್ರಯಾಣಿಕರನ್ನು ಕರೆದೊಯ್ಯೋಕೆ ಅವಕಾಶ ನೀಡಲಾಗಿಲ್ಲ, ಅನುಮತಿಯಿಲ್ಲದಿದ್ದರೂ ಬೈಕ್ ಟ್ಯಾಕ್ಸಿಗಳನ್ನು ಬಳಸಲಾಗುತ್ತಿದೆ ಎಂದು ಈ ಹಿಂದೆ ಹೀಗಾಗಿ ಬೈಕ್ ಟ್ಯಾಕ್ಸಿ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಗೆ ರಾಜ್ಯ ಸರ್ಕಾರದ ಪರ ವಕೀಲ ಎ.ಜಿ. ಶಶಿಕಿರಣ್ ಶೆಟ್ಟಿ ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಕೋರ್ಟ್, ಬೈಕ್ ಟ್ಯಾಕ್ಸಿ ಬದಲು ಗಿಗ್ ಕಾರ್ಮಿಕರ ಬಗ್ಗೆ ಹೇಳುತ್ತಿದ್ದೀರಿ. ಒಂದು ತಿಂಗಳು ಸಮಯ ನೀಡಿದ್ದರೂ ಈ ಬಗ್ಗೆ ಸರ್ಕಾರ ನೀತಿ ರೂಪಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.

6 ಲಕ್ಷಕ್ಕೂ ಹೆಚ್ಚು ಜನ ಬೈಕ್‌ ಟ್ಯಾಕ್ಸಿಯಿಂದ ಜೀವನ
ಬೆಂಗಳೂರಿನಲ್ಲಿ ಲಕ್ಷಾಂತರ ಮಂದಿ ದುಡಿಯುತ್ತಿದ್ದಾರೆ, ಅದ್ರಲ್ಲಿ ಒಂದು ದಿನದ ಹೊಟ್ಟೆಪಾಡಿಗಾಗಿ ಟ್ಯಾಕ್ಸಿ ಚಲಾಯಿಸಿಕೊಂಡು ಲೈಫ್‌ ಲೀಡ್‌ ಮಾಡೋ ಜನ ಬಹಳಷ್ಟಿದ್ದಾರೆ. ಒಟ್ಟಾರೆಯಾಗಿ, ಆರು ಲಕ್ಷಕ್ಕೂ ಅಧಿಕ ಜನ ಸವಾರರು ಬೈಕ್ ಟ್ಯಾಕ್ಸಿ ನಂಬಿಕೊಂಡು ತಮ್ಮ ಜೀವನ ಸಾಗಿಸುತ್ತಿರುವುದು ಕಂಡುಬಂದಿದೆ. ಈ ಹಿಂದೆ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಖಾಸಗಿ, ಸಾರಿಗೆ ಸಂಘಟನೆಗಳು ತೀವ್ರ ಪಟ್ಟು ಹಿಡಿದ ಬೆನ್ನಲ್ಲೇ ಸುರಕ್ಷತೆಯ ದೃಷ್ಟಿಯಿಂದ ಜೂನ್ 16ರಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ರದ್ದಾಗಿತ್ತು. ಇನ್ನು ನೀತಿ ಚೌಕಟ್ಟು ನಿಗದಿಪಡಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೇಳಿತ್ತು. ಬೆಂಗಳೂರು ವ್ಯಾಪ್ತಿಯಲ್ಲೇ 1.20 ಲಕ್ಷ ಬೈಕ್ ಗಳು ಬೈಕ್ ಟ್ಯಾಕ್ಸಿ ಸೇವೆಗೆ ನೋಂದಣಿ ಮಾಡಿಕೊಂಡಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page