ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಈಗ ಜಾಮೀನಿನ ಮೇಲೆ ಹೊರಗಿರುವ ನಟ ದರ್ಶನ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಡುಗಡೆಗೂ ಮುನ್ನ ಹಲವು ಷರತ್ತುಗಳೊಂದಿಗೆ ಜಾಮೀನು ನೀಡಿದ್ದ ಹೈಕೋರ್ಟ್ ಈಗ ಆ ಷರತ್ತುಗಳನ್ನು ಸಡಿಲಗೊಳಿಸಿದೆ.
ದರ್ಶನ್ ಬಿಡುಗಡೆಯ ವೇಳೆ ವಿದೇಶಕ್ಕೆ ತೆರಳದಂತೆ ನಿರ್ಬಂಧ ಹೇರಿ ಜಾಮೀನು ನೀಡಿತ್ತು. ಆದರೆ ನಂತರ ಷರತ್ತು ಸಡಿಲಿಕೆ ಕೋರಿ ದರ್ಶನ್ ಕೋರ್ಟ್‌ಗೆ ಮನವಿ ಮಾಡಿದ್ದರು. ಅದರನ್ವಯ ಇದೀಗ ನಟ ದರ್ಶನ್‌ಗೆ ವಿದೇಶಪ್ರಯಾಣಕ್ಕೆ ಅನುಮತಿ ನೀಡಿ ಕೋರ್ಟ್ ಆದೇಶಿಸಿದೆ.
ಡೆವಿಲ್ ಚಿತ್ರದ ಶೂಟಿಂಗ್‌ಗಾಗಿ ಚಿತ್ರತಂಡ ಎಲ್ಲಾ ತಯಾರಿಯನ್ನೂ ನಡೆಸಿ ಕಾಯುತ್ತಿರುವಾಗಲೇ ವಿದೇಶ ಪ್ರಯಾಣಕ್ಕೆ ಅನುಮತಿ ಸಿಕ್ಕಿರೋದು ನಟ ದರ್ಶನ್ ಹಾಗೂ ಆತನನ್ನು ನಂಬಿ ಚಿತ್ರ ನಿರ್ಮಾಣ ಮಾಡುತ್ತಿರುವ ಸಂಸ್ಥೆಯೂ ನಿಟ್ಟುಸಿರು ಬಿಡುವಂತಾಗಿದೆ