Home ಅಪರಾಧ ನಟ ಸಾಧು ಕೋಕಿಲ, ಮಂಡ್ಯ ರಮೇಶ್‌ಗೆ ಹೈಕೋರ್ಟ್‌ ಬಿಗ್‌ ರಿಲೀಫ್‌

ನಟ ಸಾಧು ಕೋಕಿಲ, ಮಂಡ್ಯ ರಮೇಶ್‌ಗೆ ಹೈಕೋರ್ಟ್‌ ಬಿಗ್‌ ರಿಲೀಫ್‌

0

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣಲ್ಲಿ ಕನ್ನಡದ ಹಾಸ್ಯನಟ (Comedian) ಸಾಧು ಕೋಕಿಲ (Sadhu Kokila) ಹಾಗೂ ಮಂಡ್ಯ ರಮೇಶ್‌ಗೆ (Mandya Ramesh) ಹೈಕೋರ್ಟ್‌ (High Court) ಬಿಗ್‌ ರಿಲೀಫ್‌ ನೀಡಿದೆ.

ಪ್ರಕರಣ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ ಉಮಾ ಅವರನ್ನೊಳಗೊಂಡ ನ್ಯಾಯಪೀಠವು ಇಂದು ಪ್ರಕರಣವನ್ನು ರದ್ದುಗೊಳಿಸಿ ಆದೇಶ ಮಾಡಿದೆ.

ಮೈಸೂರಿನ ಬ್ಯೂಟಿ ಪಾರ್ಲರ್ ನ ಮಹಿಳೆಯೊಬ್ಬರು ಸಾಧುಕೋಕಿಲ ಹಾಗೂ ಮಂಡ್ಯ ರಮೇಶ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಮಸಾಜ್ ಮಾಡಿಸಿಕೊಳ್ಳುವಾಗ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಮೈಸೂರಿನ ಸರಸ್ವತಿ ಪುರಂ ಪೊಲೀಸರು ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇತ್ತ ಆರೋಪ ಪಟ್ಟಿ ರದ್ದುಕೋರಿ ಸಾಧು ಕೋಕಿಲ, ಮಂಡ್ಯ ರಮೇಶ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಎಫ್ಐಆರ್ ನಲ್ಲಿ ಹೆಸರಿಲ್ಲ, ಆರೋಪಕ್ಕೆ ಸಾಕ್ಷ್ಯಗಳಿಲ್ಲವೆಂದು ಅರ್ಜಿದಾರರ ಪರವಾಗಿ ಹಿರಿಯ ವಕೀಲ ಹೆಚ್.ಎಸ್ ಚಂದ್ರಮೌಳಿ ವಾದಿಸಿದ್ದರು.

ವಾದ-ಪ್ರತಿವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ ಉಮಾ ಅವರನ್ನೊಳಗೊಂಡ ನ್ಯಾಯಪೀಠವು, ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಪ್ರಕರಣ ರದ್ದುಪಡಿಸಿ ಆದೇಶಿಸಿದ್ದಾರೆ. ಆ ಮೂಲಕ ನಟ ಸಾಧು ಕೋಕಿಲ, ಮಂಡ್ಯ ರಮೇಶ್ ಗೆ ಬಿಗ್ ರಿಲೀಫ್ ನೀಡಿದ್ದಾರೆ.

You cannot copy content of this page

Exit mobile version