ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಯುವಾಗ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಪರಿಷತ್ ಸದಸ್ಯ ಸಿಟಿ ರವಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಅವಾಚ್ಯ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣ ರದ್ದುಕೋರಿ ಸಿಟಿ ರವಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ಪ್ರಕರಣದ ತನಿಖೆಗೆ ನೀಡಿದ ತಡೆಯಾಜ್ಞೆಯನ್ನು ವಿಸ್ತರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ವಿಚಾರಣೆ ವೇಳೆ ಸಿಟಿ ರವಿ ಪರವಾಗಿ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು. ಸದನದಲ್ಲಿ ಆಡಿದ ಮಾತುಗಳಿಗೆ ರಕ್ಷಣೆ ಇದೆ. ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಲಾಯಿತು. ಓರ್ವ ಮಹಿಳಾ ಸಚಿವೆಯಾಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಗೌರವವಿದೆ ಎಂದು MLC ಸಿಟಿ ರವಿ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ ವಾದ ಮಂಡಿಸಿದರು.
ಅಕ್ಷೇಪಣೆ ಸಲ್ಲಿಸಲು ಲಕ್ಷ್ಮಿ ಹೆಬ್ಬಾಳ್ಕರ್ ಪರ ವಕೀಲರು ಕಾಲಾವಕಾಶ ಕೋರಿದರು. ಇದೆ ವೇಳೆ ಹೈಕೋರ್ಟ್ ಏಕ ಸದಸ್ಪೀಠ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ಮುಂದೂಡಿತು. ಅಲ್ಲದೆ ತನಿಖೆಗೆ ನೀಡಿದ ತಡೆಯಜ್ಞೆಯನ್ನು ವಿಸ್ತರಿಸಿ ಆದೇಶ ಹೊರಡಿಸಿತು.