Home ರಾಜ್ಯ ಕೋಲಾರ ಮಾಲೂರು ಶಾಸಕ ಕೆ.ವೈ ನಂಜೇಗೌಡರ ಶಾಸಕ ಸ್ಥಾನ ಅಸಿಂಧುಗೊಳಿಸಿದ ಹೈಕೋರ್ಟ್; ಸುಪ್ರೀಂಕೋರ್ಟ್‌ನಿಂದ ಮೇಲ್ಮನವಿಗೆ ಅವಕಾಶ

ಮಾಲೂರು ಶಾಸಕ ಕೆ.ವೈ ನಂಜೇಗೌಡರ ಶಾಸಕ ಸ್ಥಾನ ಅಸಿಂಧುಗೊಳಿಸಿದ ಹೈಕೋರ್ಟ್; ಸುಪ್ರೀಂಕೋರ್ಟ್‌ನಿಂದ ಮೇಲ್ಮನವಿಗೆ ಅವಕಾಶ

0

ಮಾಲೂಕು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆವೈ ನಂಜೇಗೌಡ ಅವರ ಆಯ್ಕೆಯನ್ನು ಕರ್ನಾಟಕ ಹೈಕೋರ್ಟ್‌ ಅಸಿಂಧುಗೊಳಿಸಿದೆ. ಇದರ ಜೊತೆಗೆ 2023 ರ ಚುನಾವಣೆಯ ಮತಗಳ ಮರು ಎಣಿಕೆ ಮಾಡುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ಮಾಲೂರು ಕ್ಷೇತ್ರದಿಂದ ಶಾಸಕರಾಗಿ ಕೆವೈ ನಂಜೇಗೌಡ ಆಯ್ಕೆಯಾಗಿರುವುದನ್ನು ಅನೂರ್ಜಿತಗೊಳಿಸಬೇಕು. ಚುನಾವಣೆಯಲ್ಲಿ ಗೋಲ್‌ಮಾಲ್ ಆಗಿರುವ ಬಗ್ಗೆ ವಿಚಾರಣೆಗೆ ಅವಕಾಶ ನೀಡಬೇಕು ಎಂದು ಕೋರಿ ಬಿಜೆಪಿ ಪರಾಜಿತ ಅಭ್ಯರ್ಥಿ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಆ‌ರ್.ದೇವದಾಸ್ ಅವರದ್ದ ಪೀಠ ವಿಚಾರಣೆ ನಡೆಸಿತು.

ಚುನಾವಣೆ ಮತ ಎಣಿಕೆಯಲ್ಲಿ ಲೋಪವಾಗಿದೆ ಎಂದು ಬಿಜೆಪಿ ಅಭ್ಯರ್ಥಿಯು ಆರೋಪ ಮಾಡಿದ್ದ ಹಿನ್ನೆಲೆಯಲ್ಲಿ ಎರಡು ವರ್ಷಗಳ ವಿಚಾರಣೆಯ ಬಳಿಕ ಹೈಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ ಹಾಗೂ ಕೋರ್ಟ್‌ ಮತ್ತೊಮ್ಮೆ ಎಣಿಕೆಯನ್ನೂ ಮಾಡುವಂತೆ ಸೂಚನೆ ನೀಡಿದೆ.

ಶಾಸಕರ ಆಯ್ಕೆ ಅಸಿಂಧು ಎಂದಿರುವ ಹೈಕೋರ್ಟ್ ಶಾಸಕರು ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಬಹುದು ಎಂದಿದೆ. ಒಂದು ವೇಳೆ ಸುಪ್ರೀಂ ಕೋರ್ಟ್‌ನಿಂದ ಯಾವುದೇ ನಿರ್ದೇಶನ ಬರದಿದ್ದರೆ ಶಾಸಕ ಸ್ಥಾನ ಅಸಿಂಧುವಾಗಲಿದೆ. ಮರು ಮತ ಎಣಿಕೆ ನಡೆಯಲಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶಾಸಕ ಕೆವೈ ನಂಜೇಗೌಡ 248 ಮತಗಳ ಅಂತರದಿಂದ ಜಯಗಳಿಸಿದ್ದರು. ಈ ಬಗ್ಗೆ ಮಾಜಿ ಶಾಸಕ, ಬಿಜೆಪಿ ಅಭ್ಯರ್ಥಿಯಾಗಿದ್ದ ಕೆಎಸ್ ಮಂಜುನಾಥ ಗೌಡ ಅನುಮಾನ ವ್ಯಕ್ತಪಡಿಸಿದ್ದರು. ಆ ಸಂದರ್ಭದಲ್ಲಿಯೇ ಮತ ಎಣಿಕೆಯಲ್ಲಿ ಲೋಪವಾಗಿದ್ದು, ಮರು ಮತ ಎಣಿಕೆಗೆ ಆದೇಶ ನೀಡುವಂತೆ ಹೈಕೋರ್ಟ್‌ಗೆ ಮನವಿ ಮಾಡಿದ್ದರು.

ಹೀಗಾಗಿ ಇದರ ವಿಚಾರಣೆ ನಡೆಸಿದ ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ ಹಾಗೂ ಕೋರ್ಟ್‌ ಮತ್ತೊಮ್ಮೆ ಎಣಿಕೆಯನ್ನೂ ಮಾಡುವಂತೆ ಸೂಚನೆ ನೀಡಿದೆ.

You cannot copy content of this page

Exit mobile version