ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್ ರೇವಣ್ಣ ಪರ ವಕೀಲರಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನ್ಯಾಯಾಲಯದ ಆದೇಶವನ್ನೇ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ ಪರಿಣಾಮ ಹೈಕೋರ್ಟ್ ಗರಂ ಆಗಿದ್ದು, ವಕೀಲರಿಗೆ ತಪರಾಕಿ ನೀಡಿದೆ.
ಪ್ರಜ್ವಲ್ ರೇವಣ್ಣ ಅವರ ಪ್ರಕರಣವು ಜನಪತ್ರಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ದಾಖಲಾಗಿತ್ತು. ಆದರೆ ಇದನ್ನಬೇರೆ ಕೋರ್ಟ್ಗೆ ವರ್ಗಾವಣೆ ಮಾಡುವಂತೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಬಗ್ಗೆ ಹೈಕೋರ್ಟ್ ವಿಚಾರಣೆ ನಡೆಸಿದ ನಂತರ ವಕೀಲರಿಗೆ ಬಿಸಿ ಮುಟ್ಟಿಸಿದ್ದಾರೆ.
ಇದಕ್ಕೆ ಸಂಬಂಧಪಟ್ಟಂತೆ ಈ ಮೊದಲು ಪ್ರಜ್ವಲ್ ಸಿಸಿಹೆಚ್-1 ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದರು. ಆದರೆ ಸಿಸಿಹೆಚ್1 ಕೋರ್ಟ್ ಅರ್ಜಿಯನ್ನ ವಜಾ ಮಾಡಿತ್ತು. ಹಾಗಾಗಿ ಪ್ರಜ್ವಲ್ ಪರ ವಕೀಲರು ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಹೈಕೋರ್ಟ್ ನ್ಯಾಯಮೂರ್ತಿ ಎಮ್.ಐ ಅರುಣ್ ಪೀಠದಲ್ಲಿ ಅರ್ಜಿ ವಿಚಾರಣೆ ಮಾಡಲಾಗಿದೆ.
ಈ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ವಾದ ಮಂಡನೆ ಮಾಡಿದ್ದು, ಪ್ರಜ್ವಲ್ ಪರ ವಕೀಲರು ಜನಪ್ರತಿನಿಧಿಗಳ ಕೋರ್ಟ್‌ನ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಪೂರ್ವಾಗ್ರಹಪೀಡಿತರಾಗುವ ಸಾಧ್ಯತೆ ಇದೆ ಎಂದು ವಾದ ಮಾಡಿದ್ದಾರೆ. ಇದಕ್ಕೆ ಹೈಕೋರ್ಟ್ , ಹೈಕೋರ್ಟ್ ಈ ರೀತಿ ಪ್ರಕರಣವನ್ನು ವರ್ಗಾವಣೆ ಮಾಡಲು ಇಷ್ಟಪಡುವುದಿಲ್ಲ. ಈ ರೀತಿ ವರ್ಗಾವಣೆ ಮಾಡುವುದರಿಂದ. ಅದು ನ್ಯಾಯಾಧೀಶರ ಮೇಲೆ ಬೇರೆ ರೀತಿಯ ಭಾವನೆ ಬರಲು ಕಾರಣವಾಗುತ್ತದೆ. ಹಾಗಾಗಿ ಈ ರೀತಿ ಮಾಡಲು ಆಗುವುದಿಲ್ಲ ಎಂದು ಪ್ರಜ್ವಲ್ ಪರ ವಕೀಲರಿಗೆ ಹೈಕೋರ್ಟ್ ತಾಕೀತು ಮಾಡಿದೆ ಎನ್ನಲಾಗಿದೆ.
ಅಲ್ಲದೇ, ಪ್ರಜ್ವಲ್ ಪರ ವಕೀಲರ ಮೇಲೆ ಹೈಕೋರ್ಟ್ ಗರಂ ಆಗಿದ್ದು, ಪ್ರಕರಣ ಇದೆ ಎಂದು ತೋರಿಸಬೇಕು. ಈ ಪ್ರಕರಣವನ್ನ ಏಕೆ ಬೇರೆ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಬೇಕು. ಅಲ್ಲದೇ, ಈ ವಿಚಾರವಾಗಿ ನಾವು ಸರ್ಕಾರದ ವಾದ ಕೇಳುವ ಅವಶ್ಯಕತೆಯೇ ಬರುವುದಿಲ್ಲ. ನೀವು ನ್ಯಾಯಾಂಗ ಅಧಿಕಾರಿಯ ಬಗ್ಗೆ ಆರೋಪ ಮಾಡುತ್ತಿದ್ದೀರಿ ಎಂದು ಹೈಕೋರ್ಟ್ ಹೇಳಿದೆ.