ಕಾಲ್ತುಳಿತ ಪ್ರಕರಣ ಆರ್‌ಸಿಬಿ, ಕೆಎಸ್‌ಸಿಎ, ಡಿಎನ್‌ಎ ಗಳಿಗೆ ಹೈಕೋರ್ಟ್‌ ನೋಟಿಸ್‌ ಜಾರಿ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಬಲಿಯಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್‌ನಲ್ಲಿ ಪಿಐಎಲ್‌ ವಿಚಾರಣೆ ನಡೆದಿದೆ.

ಈ ವೇಳೆ ರಾಜ್ಯ ಸರ್ಕಾರ ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ವರದಿಯನ್ನು ಸಲ್ಲಿಸಿದೆ. ವಿಚಾರಣೆಯ ಬಳಿಕ ಹೈಕೋರ್ಟ್‌ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್ಎ ಸಂಸ್ಥೆಗಳಿಗೆ ನೋಟಿಸ್‌ ನೀಡಿ ವಿಚಾರಣೆಯನ್ನು ಜೂನ್‌ 23ಕ್ಕೆ ನಿಗದಿಪಡಿಸಿದೆ.

ವಿಚಾರಣೆಯ ಆರಂಭದಲ್ಲಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಿದ್ದು ಏಕೆ ಎಂದು ಹೈಕೋರ್ಟ್ ಪ್ರಶ್ನಿಸಿತು. ಇದಕ್ಕೆ ಸರ್ಕಾರದ ಪರವಾಗಿ ಹಾಜರಿದ್ದ ವಕೀಲರಾದ ಎಜಿ ಶಶಿಕಿರಣಶೆಟ್ಟಿ ಉತ್ತರಿಸಿ, ಮೂರನೇ ವ್ಯಕ್ತಿಗಳ ವಿರುದ್ಧ ಅಭಿಪ್ರಾಯವೆಂದು ಭಾವಿಸಬಾರದು ಹಾಗಾಗಿ ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲಾಗಿದೆ. ದಾಖಲೆಗಳನ್ನು ಹಂಚಿಕೊಳ್ಳುವುದಕ್ಕೆ ಸರ್ಕಾರದ ಆಕ್ಷೇಪವಿಲ್ಲ. ಆದರೆ ನ್ಯಾಯಾಂಗ ತನಿಖೆ ಬಾಕಿ ಇರುವುದರಿಂದ ವರದಿ ಬಹಿರಂಗ ಅಗುವುದು ಬೇಡ ಎಂದು ಹೇಳಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು