ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯ ಕಟ್ಟಡ ಕಾಮಾಗಾರಿ ಹಣದಲ್ಲಿ ವಿಳಂಬ ದೋರಣೆ ಪ್ರದರ್ಶಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ 2 ಲಕ್ಷ ದಂಡ ವಿಧಿಸಿ, ರಾಜ್ಯ ಸರ್ಕಾರ ಪರ್ಸೆಂಟೇಜ್ ಆಧಾರದ ಮೇಲೆ ಕೆಲಸ ಮಾಡುತ್ತಿದ್ದೇಯೆ? ಎಂದು ಹೈಕೋರ್ಟ್ ಪ್ರಶ್ನಿಸಿದೆ.
ಈ ಕುರಿತು ರಾಜ್ಯ ಕಾಂಗ್ರೆಸ್ ʼಗುತ್ತಿಗೆದಾರರು, ಜನಸಾಮಾನ್ಯರ ನಂತರ ಹೈಕೋರ್ಟ್ ಕೂಡ 40% ಸರ್ಕಾರದ ಪರ್ಸೆಂಟೇಜ್ ಬಗ್ಗೆ ಮಾತನಾಡುತ್ತಿದೆʼ ಎಂದು ಟ್ವೀಟ್ ಮಾಡಿ ವ್ಯಂಗ್ಯವಾಡಿದೆ.
ʼಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಈ ರೀತಿಯ ನಾಚಿಕೆಗೇಡಿನ ಸಂಗತಿ ಎದುರಿಟ್ಟುಕೊಂಡು ಯಾವ ಪುರುಷಾರ್ಥಕ್ಕೆ ಸಮಾವೇಶ ನಡೆಸುತ್ತಿದ್ದೀರಿ? ನಾಡಿನ ಎದುರು ತಲೆ ತಗ್ಗಿಸಬೇಕಾದ ಸಮಯವಿದುʼ ಎಂದು ಕಾಂಗ್ರೆಸ್ ಕಿಡಿಕಾರಿದೆ.