Home ರಾಜ್ಯ ಪ್ರಜ್ವಲ್‌ ರೇವಣ್ಣನಿಗಾಗಿ ಕಾನೂನನ್ನು ಬದಲಾಯಿಸಲು ಸಾಧ್ಯವಿಲ್ಲ: ಹೈಕೋರ್ಟ್

ಪ್ರಜ್ವಲ್‌ ರೇವಣ್ಣನಿಗಾಗಿ ಕಾನೂನನ್ನು ಬದಲಾಯಿಸಲು ಸಾಧ್ಯವಿಲ್ಲ: ಹೈಕೋರ್ಟ್

0

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಕಾರು ಚಾಲಕನ ಮೊಬೈಲ್‌ನಿಂದ ಪಡೆದಿರುವ ಫೋಟೋ ಮತ್ತು ಎಲ್ಲ ವೀಡಿಯೋಗಳನ್ನು ಒದಗಿಸಲು ಪ್ರಾಸಿಕ್ಯೂಷನ್‌ಗೆ ನಿರ್ದೇಶಿಸಬೇಕೆಂಬ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಮನವಿಯನ್ನು ತಳ್ಳಿ ಹಾಕಿರುವ ಹೈಕೋರ್ಟ್‌, ʼಪ್ರಜ್ವಲ್‌ ರೇವಣ್ಣ ಎಂಬ ಕಾರಣಕ್ಕೆ ಕಾನೂನು ಬದಲಿಸಲಾಗದು’ ಎಂದು ತೀಕ್ಷ್ಣವಾಗಿ ಹೇಳಿದೆ.

ಪ್ರಜ್ವಲ್‌ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ಧಾರವಾಡ ಪೀಠದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಸದ್ಯ ನ್ಯಾಯಾಲಯದ ಮುಂದಿರುವ ಪ್ರಕರಣಕ್ಕೆ ಅಗತ್ಯವಾದ ಫೋಟೋ ಮತ್ತು ವೀಡಿಯೋಗಳನ್ನು ಪ್ರಾಸಿಕ್ಯೂಷನ್‌ ಒದಗಿಸಲಿದೆ. ಅದನ್ನು ಹೊರತುಪಡಿಸಿ ಬೇರೆ ಫೋಟೋ, ವೀಡಿಯೋಗಳನ್ನು ಒದಗಿಸಲಾಗದು ಎಂದು ಸ್ಪಷ್ಟವಾಗಿ ನಿರಾಕರಿಸಿತು.

ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ನಾವು ಯಾವುದೇ ಅಶ್ಲೀಲ ಚಿತ್ರಗಳನ್ನು ಒದಗಿಸಿ ಎಂದು ಕೋರಿಲ್ಲ. 2024ರ ಎಪ್ರಿಲ್‌ 30ರ ಮಹಜರು ಸಂದರ್ಭದಲ್ಲಿ ಪ್ರಜ್ವಲ್‌ ಅವರ ಮಾಜಿ ಕಾರು ಚಾಲಕನ ಫೋನ್‌ ಮತ್ತು ಸಿಮ್‌ ಜಫ್ತಿ ಮಾಡಲಾಗಿದೆ ಎಂದರು.

ಇದಕ್ಕೆ ಹೆಚ್ಚುವರಿ ರಾಜ್ಯ ಸರಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌ ಪ್ರತಿಕ್ರಿಯಿಸಿ, ವಿಚಾರಣಾಧೀನ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ವಿಳಂಬವಾಗಿಸಲು ಇಂತಹ ಅರ್ಜಿಗಳನ್ನು ಸಲ್ಲಿಕೆ ಮಾಡಲಾಗುತ್ತಿದೆ ಎಂದು ಆಕ್ಷೇಪಿಸಿದರು. ಬೇರೆಯವರ ಖಾಸಗಿತನ ಉಲ್ಲಂ ಸುವ ಚಿತ್ರಗಳು ನಿಮಗೇಕೆ? ಎಂದು ಕಟುವಾಗಿ ಕೋರ್ಟ್‌ ಪ್ರಶ್ನಿಸಿತು.

You cannot copy content of this page

Exit mobile version