Home ಬ್ರೇಕಿಂಗ್ ಸುದ್ದಿ Big Breaking : PSI ನೇಮಕಾತಿಯ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ ; 296 ಅಭ್ಯರ್ಥಿಗಳಿಗೆ...

Big Breaking : PSI ನೇಮಕಾತಿಯ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶ ; 296 ಅಭ್ಯರ್ಥಿಗಳಿಗೆ ಶಾಕ್!

0

545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ (PSI) ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮರು ಪರೀಕ್ಷೆಗೆ ಹೈಕೋರ್ಟ್ ಆದೇಶಿಸಿದೆ. ಅಕ್ರಮದ ಹಿನ್ನೆಲೆಯಲ್ಲಿ ಹಿಂದಿನ ಸರ್ಕಾರ ಮರು ಪರೀಕ್ಷೆಗೆ ಆದೇಶ ಮಾಡಿತ್ತು.

ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ, ಆಯ್ಕೆ ಪಟ್ಟಿಯನ್ನು ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಹಿಂದಿನ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆಯ್ಕೆ ಪಟ್ಟಿಯಲ್ಲಿದ್ದ 296ಕ್ಕೂ ಹೆಚ್ಚು ಅಭ್ಯರ್ಥಿಗಳು ಅಕ್ರಮ ಎಸಗಿದವರನ್ನು ಪ್ರತ್ಯೇಕಿಸಿ, ಅಕ್ರಮದಲ್ಲಿ ಭಾಗಿಯಾಗಿರದೇ ಇರುವವರನ್ನು ನೇಮಕಾತಿ ಅಂತಿಮಗೊಳಿಸುವಂತೆ ಕೋರಿದ್ದರು.

ಅದರಂತೆ ಮರುಪರೀಕ್ಷೆ ಬಗ್ಗೆ ತಕರಾರು ಎತ್ತಿದ 296 ಅಭ್ಯರ್ಥಿಗಳು ಮರು ಪರೀಕ್ಷೆ ನಡೆಸದಂತೆ ಕೆಎಸ್ ಸಿಗೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ಕೆಎಸ್ ಸಿ ವಜಾಗೊಳಿಸಿತ್ತು. ಹೀಗಾಗಿ 296 ಅಭ್ಯರ್ಥಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.

ಈ ಮೂಲಕ ಹೈಕೋರ್ಟ್ ಮೆಟ್ಟಿಲೇರಿದ್ದಂತ ಅಭ್ಯರ್ಥಿಗಳಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ.

ಮರು ಪರೀಕ್ಷೆ ವಿರೋಧಿಸಿ 296 ಅಭ್ಯರ್ಥಿಗಳು ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಹೈಕೋರ್ಟ್ ನ್ಯಾಯಪೀಠವು, ಮರು ಪರೀಕ್ಷೆಗೆ ಮಧ್ಯಂತರ ತಡೆಯಾಜ್ಞೆಯನ್ನು ನೀಡಿತ್ತು. ಆ ಬಳಿಕ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು.

ನ್ಯಾಯಮೂರ್ತಿ ದಿನೇಶ್ ಕುಮಾರ್ ಅವರ ನೇತೃತ್ವದ ವಿಭಾಗೀಯ ಪೀಠವು ಇಂದು ತನ್ನ ಕಾಯ್ದಿರಿಸಿದ್ದಂತ ತೀರ್ಪನ್ನು ಇಂದು ಪ್ರಕಟಿಸಿದ್ದು, 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಗೆ ಮರು ಪರೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದೆ. ಅಲ್ಲದೇ ಸ್ವತಂತ್ರ ಸಂಸ್ಥೆಯಿಂದ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ ಮಹತ್ವದ ಆದೇಶ ಕೂಡಾ ಮಾಡಿದೆ.

You cannot copy content of this page

Exit mobile version