Home ಬೆಂಗಳೂರು ʼಹಿಂದೂ ಎನ್ನುವುದು ಅಶ್ಲೀಲ ಪದʼ ಹೇಳಿಕೆ: ಸತೀಶ ಜಾರಕಿಹೊಳಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ʼಹಿಂದೂ ಎನ್ನುವುದು ಅಶ್ಲೀಲ ಪದʼ ಹೇಳಿಕೆ: ಸತೀಶ ಜಾರಕಿಹೊಳಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

0

ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದು ಮಾಡಿದೆ.

ಸಚಿವ ಸತೀಶ್‌ ಜಾರಕಿಹೊಳಿ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಪುರಸ್ಕರಿಸಿದೆ.

ಈ ಹಿಂದೆ “ಹಿಂದೂ ಎನ್ನುವುದು ಭಾರತೀಯ ಪದವಲ್ಲ. ಅದು ಪರ್ಷಿಯನ್‌ ನೆಲಕ್ಕೆ ಸೇರಿದ ಪದವಾಗಿದ್ದು, ಅದಕ್ಕೆ ಅಶ್ಲೀಲ ಅರ್ಥವಿದೆ” ಎಂದು ಕಾರ್ಯಕ್ರಮವೊಂದರಲ್ಲಿ ಸಚಿವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಈ ಹಿಂದೆ ಈ ವಿಷಯವಾಗಿ ಜಾರಕಿಹೊಳಿಯವರ ವಿರುದ್ಧ ವಕೀಲ ದಿಲೀಪ್ ದೂರು ದಾಖಲಿಸಿದ್ದರು.

ಗಲಭೆಗೆ ಪ್ರಚೋದನೆ ನೀಡಿದ, ಮತ್ತೊಬ್ಬರಿಗೆ ಅವಮಾನ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅದನ್ನು ರದ್ದುಪಡಿಸುವಂತೆ ಕೋರಿ ಸತೀಶ ಜಾರಕಿಹೊಳಿ ಹೈಕೋರ್ಟ್ ಮೆಟ್ಟಿಲೇರಿದ್ದರು.

You cannot copy content of this page

Exit mobile version