ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇಡಿ) ನೀಡಿದ್ದ ಸಮನ್ಸ್ ರದ್ದುಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಇಬ್ಬರಿಗೂ ಸಿಹಿ ಸುದ್ದಿ ನೀಡಿದೆ.
ಇಡಿ ನೀಡಿದ್ದ ಸಮನ್ಸ್ ಆಧಾರದಲ್ಲಿ ವಿಚಾರಣೆ ನಡೆಸಿದ ಹೈಕೋರ್ಟ್ ಸಮನ್ಸ್ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಜಸ್ಟೀಸ್ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಭೈರತಿ ಸುರೇಶ್ ಹಾಗೂ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಇಡಿ ನೀಡಿದ್ದ ಸಮನ್ಸ್ ಅನ್ನು ರದ್ದುಗೊಳಿಸಿದೆ.
ಈ ಹಿಂದೆ ಸಿಎಂ ಸಿದ್ದರಾಮಯ್ಯನವರು ಇಡಿ ತನಿಖೆಯಿಂದಲೂ ಪಾರಾಗಿದ್ದರು. ಈಗ ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಅವರಿಗೂ ಸಹ ಹೈಕೋರ್ಟ್ ರಿಲೀಫ್ ನೀಡಿದ್ದು, ಮುಡಾ ಪ್ರಕರಣದಲ್ಲಿ ಅವರಿಗೆ ಬಹಳ ದೊಡ್ಡ ಜಯ ಸಿಕ್ಕಂತಾಗಿದೆ. ಆ ಮೂಲಕ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯಲ್ಲಿ ಮಹತ್ವದ ತಿರುವು ಸಿಕ್ಕಿದೆ.