ಬೆಂಗಳೂರು: ಧರ್ಮಸ್ಥಳದ ಸೌಜನ್ಯಾ ಪರ ಹೋರಾಟ ಮತ್ತು ‘ಬುರುಡೆ’ ಪ್ರಕರಣಗಳಲ್ಲಿ ಮುಂಚೂಣಿಯಲ್ಲಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು (Exile) ಮಾಡುವ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಲಾಗಿದ್ದ ಅರ್ಜಿ ಇಂದು ವಿಚಾರಣೆಗೆ ಬಂದಿದೆ.
ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಮಹೇಶ್ ಶೆಟ್ಟಿ ತಿಮರೋಡಿ ಅವರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಆದೇಶಿಸಿದೆ.
ಗಡಿಪಾರು ಆದೇಶಕ್ಕೆ ತಡೆಯಾಜ್ಞೆ ಕೋರಿದ್ದ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು, ಅಕ್ಟೋಬರ್ 8 ರವರೆಗೆ ಗಡಿಪಾರು ಆದೇಶವನ್ನು ಜಾರಿಗೊಳಿಸದಂತೆ ಅಧಿಕಾರಿಗಳಿಗೆ ಸೂಚಿಸಿದೆ. ಈ ಮೂಲಕ, ಗಡಿಪಾರಿನ ವಿಷಯದಲ್ಲಿ ಯಾವುದೇ ಒತ್ತಾಯದ ಕ್ರಮವನ್ನು ಕೈಗೊಳ್ಳದಂತೆ ಹೈಕೋರ್ಟ್ ತಾಕೀತು ಮಾಡಿದೆ. ಮೇಲ್ಮನವಿಯ ಮುಂದಿನ ವಿಚಾರಣೆಯು ಅಕ್ಟೋಬರ್ 8 ರಂದು ನಡೆಯಲಿದೆ.