52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಕ್ರಮಕ್ಕೆ – ಹೈಕೋರ್ಟ್ ತಡೆ

ಬೆಂಗಳೂರು: ರಾಜ್ಯ ಸರ್ಕಾರ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಈ ಕುರಿತು ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, 2026ರ ಮೇ 27ರಂದು ರಾಜ್ಯ ಸರ್ಕಾರ ಕೈಗೊಂಡಿದ್ದ ಪ್ರಕರಣ ವಾಪಸ್ ಪಡೆಯುವ ನಿರ್ಧಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಸರ್ಕಾರವು ವಾಪಸ್ ಪಡೆಯಲು ನಿರ್ಧರಿಸಿದ್ದ ಪ್ರಕರಣಗಳಲ್ಲಿ ಕಲಬುರಗಿ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣ ಸೇರಿದಂತೆ ಹಲವು ಕೋಮು ಗಲಭೆ ಪ್ರಕರಣಗಳು ಸೇರಿವೆ. ಈ ಪ್ರಕರಣಗಳನ್ನು ಹಿಂಪಡೆಯಲು ಯು.ಟಿ. ಖಾದರ್ ಅವರ ಶಿಫಾರಸು ಇತ್ತು ಎಂಬ ಆರೋಪವೂ ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು.

ಆದರೆ, ಈ ಹಂತದಲ್ಲಿ ಯು.ಟಿ. ಖಾದರ್ ಅವರಿಗೆ ನೋಟಿಸ್ ನೀಡಲು ಹೈಕೋರ್ಟ್ ನಿರಾಕರಿಸಿದೆ. ಬದಲಾಗಿ, ರಾಜ್ಯದ ಗೃಹ ಇಲಾಖೆ ಹಾಗೂ ಅಭಿಯೋಜನಾ ಇಲಾಖೆಗೆ ನೋಟಿಸ್ ಜಾರಿ ಮಾಡಿ, ಮುಂದಿನ ವಿಚಾರಣೆಯನ್ನು ಮುಂದೂಡಿದೆ.

Related Articles

ಇತ್ತೀಚಿನ ಸುದ್ದಿಗಳು