Friday, April 26, 2024

ಸತ್ಯ | ನ್ಯಾಯ |ಧರ್ಮ

ಜೆಡಿಎಸ್‌ ನಾಯಕರೊಂದಿಗೆ ಹೈಕಮಾಂಡ್‌ ಮಾತನಾಡಿ ಸಮಸ್ಯೆ ಬಗೆಹರಿಸುತ್ತದೆ: ಬಿ.ವೈ ವಿಜಯೇಂದ್ರ

ಬೆಂಗಳೂರು: ಬಿಜೆಪಿ- ಜೆಡಿಎಸ್ ನಡುವೆ ಸಣ್ಣಪುಟ್ಟ ವ್ಯತ್ಯಾಸಗಳಿವೆ, ಭಿನ್ನಾಭಿಪ್ರಾಯಗಳಿರುವುದು ನಿಜ. ಆದರೆ, ಎಲ್ಲವೂ ಸುಖಾಂತ್ಯ ಆಗಲಿದೆ. ಜೆಡಿಎಸ್‌ ನಾಯಕರೊಂದಿಗೆ ಬಿಜೆಪಿ ಹೈಕಮಾಂಡ್‌ ಮಾತನಾಡಿ ಸಮಸ್ಯೆ ಬಗೆಹರಿಸುತ್ತದೆ ಎಂಬ ವಿಶ್ವಾಸವಿದೆ ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಬಿಜೆಪಿ- ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರಿಯುತ್ತದೆ ನಗರದ ಡಾಲರ್ಸ್ ಕಾಲನಿ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ನಮ್ಮ ರಾಷ್ಟ್ರೀಯ ನಾಯಕರು ಮಾತನಾಡಿ ಸಮರ್ಪಕ ತೀರ್ಮಾನ ಮಾಡುವ ವಿಶ್ವಾಸ ಇದೆ. ಚರ್ಚೆಯಿಂದ ವಿಷಯ ಬಗೆಹರಿಯಲಿದೆ ಎಂದು ತಿಳಿಸಿದರು.

ನಮ್ಮ ರಾಷ್ಟ್ರೀಯ ನಾಯಕರ ಜೊತೆ ನಿನ್ನೆ ದೂರವಾಣಿ ಮೂಲಕ ಚರ್ಚೆ ಮಾಡಿದ್ದೇನೆ. ಬಳಿಕ ಮಾಜಿ ಪ್ರಧಾನಿ ದೇವೇಗೌಡರ ಜೊತೆಗೂ ದೂರವಾಣಿ ಮೂಲಕ ಚರ್ಚಿಸಿದ್ದೇನೆ. ಎಚ್.ಡಿ.ಕುಮಾರಸ್ವಾಮಿಯವರಿಗೂ ಬೆಳಗ್ಗೆ ಮಾಹಿತಿ ನೀಡಿದ್ದೇನೆ. ಎಲ್ಲವೂ ಸುಖಾಂತ್ಯ ಕಾಣಲಿದೆ ಎಂದು ಮಾಧ್ಯಮದವರ ಪ್ರಶ್ನೆಗೆ ಅವರು ಉತ್ತರಿಸಿದರು.

ಸದಾನಂದ ಗೌಡ ಕೂಡ ಬಿಜೆಪಿಯಲ್ಲೇ ಇರುತ್ತಾರೆ. ಈ ಕುರಿತು ಗೊಂದಲಗಳು ಬೇಡ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರ ನೀಡಿದರು.

ಈಶ್ವರಪ್ಪ ಹಿರಿಯ ನಾಯಕರು. ಕೆಲವು ತಪ್ಪು ಮಾಹಿತಿಗಳು ಅವರಿಗೆ ತಲುಪಿವೆ. ಹಾಗಾಗಿ ಈ ರೀತಿ ಚರ್ಚೆಗಳು ನಡೆಯುತ್ತಿವೆ. ಅವರಿಗೆ ಸತ್ಯ ಅರ್ಥ ಆದಮೇಲೆ ಸಮಸ್ಯೆ ಬಗೆಹರಿಯುವ ವಿಶ್ವಾಸ ನನಗೆ ಈಗಲೂ ಇದೆ ಎಂದು ತಿಳಿಸಿದರು.

ಬಿಜೆಪಿ ಅಭ್ಯರ್ಥಿಗಳ ಮೊದಲನೇ ಪಟ್ಟಿ ಬಿಡುಗಡೆ ಆಗಿದೆ. ಅಭ್ಯರ್ಥಿಗಳ ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆ ಆಗಲಿದೆ ಟಿಕೆಟ್ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಅವರು ಸ್ಪಷ್ಟಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು