Thursday, August 22, 2024

ಸತ್ಯ | ನ್ಯಾಯ |ಧರ್ಮ

ಜಾರಿ ನಿರ್ದೇಶನಾಲಯದ ವಿರುದ್ಧ ದಾಖಲಾಗಿದ್ದ FIR ವಿರುದ್ಧ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ತಮಗೆ ಮಾನಸಿಕ ಕಿರುಕುಳ ನೀಡಲಾಗುತ್ತಿದೆ. ಬೆದರಿಕೆ ಹಾಕುತ್ತಿದ್ದಾರೆ ಎಂದು ಪರಿಶಿಷ್ಟ ನಿಗಮದ ಮಾಜಿ ಎಂಡಿ ನೀಡಿದ ದೂರಿನ ಆಧಾರದ ಮೇಲೆ ಇಬ್ಬರು ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇಂದು ಆ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಪ್ರಕರಣದ ತನಿಖೆಯ ವೇಳೆ ಮಾಜಿ ಸಚಿವ ನಾಗೇಂದ್ರ ಹೆಸರು ಬಹಿರಂಗಪಡಿಸುವಂತೆ ಒತ್ತಡ ಹೇರಿದ ಆರೋಪದ ಮೇಲೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯದ (ಇಡಿ) ಇಬ್ಬರು ಅಧಿಕಾರಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ನಿನ್ನೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಒತ್ತಡಕ್ಕೆ ಮಣಿದು ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವುದನ್ನು ಒಪ್ಪಿಕೊಳ್ಳುವಂತೆ ಇಡಿ ಅಧಿಕಾರಿಗಳು ಒತ್ತಡ ಹೇರಿ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ನಿಗಮದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಕಲ್ಲೇಶ್ ಬಿ. ದೂರು ನೀಡಿದ್ದರು.

ಇಡಿ ಅಧಿಕಾರಿಗಳ ಪರ ವಾದ ಮಂಡಿಸಿದ ಹಿರಿಯ ವಕೀಲ ಮಧುಕರ ದೇಶಪಾಂಡೆ, ಅರ್ಜಿದಾರರು ಇಡಿ ಅಧಿಕಾರಿಗಳು ತಮ್ಮ ಅಧಿಕೃತ ಕರ್ತವ್ಯವನ್ನು ಮಾತ್ರ ನಿರ್ವಹಿಸಿದ್ದಾರೆ. ಆದರೆ, ಇಡಿ ವಿಚಾರಣೆಗೆ ಹಾಜರಾಗಿದ್ದ ದೂರುದಾರರು ವಿಚಾರಣೆ ಬಳಿಕ ನೇರವಾಗಿ ಠಾಣೆಗೆ ತೆರಳಿ ಇಡಿ ದೂರು ದಾಖಲಿಸಿದ್ದಾರೆ ಎಂದು ವಾದಿಸಿದರು.

ಇಡಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಯಾವುದೇ ಪ್ರಾಥಮಿಕ ವಿಚಾರಣೆ ನಡೆಸದೆ ಇಡಿ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹಾಗಾಗಿ ಅರ್ಜಿಯನ್ನು ಕೂಡಲೇ ವಿಚಾರಣೆಗೆ ಒಳಪಡಿಸಬೇಕು ಎಂದು ಮನವಿ ಮಾಡಿದರು. ಅದಕ್ಕೆ ಒಪ್ಪಿಗೆ ಸೂಚಿಸಿದ ಪೀಠ ಇಂದು ಅರ್ಜಿ ವಿಚಾರಣೆ ನಡೆಸಿತು. ವಾದ ಆಲಿಸಿದ ಹೈಕೋರ್ಟ್ ಪೀಠ ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ತಡೆ ನೀಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page